ವಿಜಯನಗರ ಶ್ರೀಕೃಷ್ಣದೇವರಾಯ ವಿವಿ : ಕುಲಸಚಿವರಾಗಿ ವಿಶ್ವಜೀತ್ ಮೆಹತಾ ಅಧಿಕಾರ ಸ್ವೀಕಾರ
ಬಳ್ಳಾರಿ, 26 ನವೆಂಬರ್ (ಹಿ.ಸ.) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ವಿಶ್ವಜೀತ್ ಮೆಹತಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಹೊಸಪೇಟೆಯ ವಿಜಯನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮೆಹತಾ ಅವರಿಗ
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ : ಕುಲಸಚಿವರಾಗಿ ವಿಶ್ವಜೀತ್ ಮೆಹತಾ


ಬಳ್ಳಾರಿ, 26 ನವೆಂಬರ್ (ಹಿ.ಸ.)

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ವಿಶ್ವಜೀತ್ ಮೆಹತಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಪ್ರಸ್ತುತ ಹೊಸಪೇಟೆಯ ವಿಜಯನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮೆಹತಾ ಅವರಿಗೆ, ವಿಶ್ವವಿದ್ಯಾಲಯದ ಕುಲಸಚಿವರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ರಾಜ್ಯ ಸರ್ಕಾರವು ಕಳೆದ ನವೆಂಬರ್ 17ರಂದು ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಗುರುವಾರ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ, ಈವರೆಗೆ ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ವಿ. ಲೋಕೇಶ್ ಅವರು ನೂತನ ಕುಲಸಚಿವ ವಿಶ್ವಜೀತ್ ಮೆಹತಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande