ನ.28: ಶಿಕ್ಷಕರಿಗೆ ಪೋಕ್ಸೋ ಕಾಯ್ದೆ ಕಾರ್ಯಾಗಾರ
ಬಳ್ಳಾರಿ, 26 ನವೆಂಬರ್ (ಹಿ.ಸ.) ''ಸುರಕ್ಷತ್ ಬಚಪನ್'' ಅಭಿಯಾನದ ಅಂಗವಾಗಿ ಶಿಕ್ಷಕರಿಗೆ ಮಕ್ಕಳ ಹಕ್ಕುಗಳು, ರಕ್ಷಣೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮವನ್ನು ನವೆಂಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಯ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಮೊದಲ ಮಹಡಿಯಲ್ಲಿರುವ ಜಿಲ್ಲಾ ನ್ಯ
ನ.28: ಶಿಕ್ಷಕರಿಗೆ ಪೋಕ್ಸೋ ಕಾಯ್ದೆ ಕಾರ್ಯಾಗಾರ


ಬಳ್ಳಾರಿ, 26 ನವೆಂಬರ್ (ಹಿ.ಸ.)

'ಸುರಕ್ಷತ್ ಬಚಪನ್' ಅಭಿಯಾನದ ಅಂಗವಾಗಿ ಶಿಕ್ಷಕರಿಗೆ ಮಕ್ಕಳ ಹಕ್ಕುಗಳು, ರಕ್ಷಣೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮವನ್ನು ನವೆಂಬರ್ 28 ರಂದು ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಯ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಮೊದಲ ಮಹಡಿಯಲ್ಲಿರುವ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ, ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಉದ್ಘಾಟಿಸಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಬಳ್ಳಾರಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್. ಎಂ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ವಕೀಲರಾದ ತ್ರಿವೇಣಿ ಪತ್ತಾರ್, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ತಿಪ್ಪೇಶಪ್ಪ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಜಯಲಕ್ಷ್ಮೀ ಅವರು ತರಬೇತಿ ನೀಡುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande