ಹಕ್ಕು-ಸಮಾನತೆಗೆ ಹೋರಾಡಿದ ಮಹನೀಯರ ಸೇವೆ ಸ್ಮರಣೀಯ
ಬಳ್ಳಾರಿ, 26 ನವೆಂಬರ್ (ಹಿ.ಸ.) ನಾವೆಲ್ಲರೂ ಸ್ವತಂತ್ರವಾಗಿ, ನಿರಾಳವಾಗಿ ಬದುಕಲು ಹಾಗೂ ಅಧಿಕಾರ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ರಾಜಕೀಯ ಹಕ್ಕುಗಳನ್ನು ಪಡೆಯಲು ಹಿಂದಿನ ಮಹನೀಯರ ಶ್ರಮ ಮತ್ತು ಹೋರಾಟವೇ ಕಾರಣ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್
ಹಕ್ಕು-ಸಮಾನತೆಗೆ ಹೋರಾಡಿದ ಮಹನೀಯರ ಸೇವೆ ಸ್ಮರಣೀಯ


ಹಕ್ಕು-ಸಮಾನತೆಗೆ ಹೋರಾಡಿದ ಮಹನೀಯರ ಸೇವೆ ಸ್ಮರಣೀಯ


ಬಳ್ಳಾರಿ, 26 ನವೆಂಬರ್ (ಹಿ.ಸ.)

ನಾವೆಲ್ಲರೂ ಸ್ವತಂತ್ರವಾಗಿ, ನಿರಾಳವಾಗಿ ಬದುಕಲು ಹಾಗೂ ಅಧಿಕಾರ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ರಾಜಕೀಯ ಹಕ್ಕುಗಳನ್ನು ಪಡೆಯಲು ಹಿಂದಿನ ಮಹನೀಯರ ಶ್ರಮ ಮತ್ತು ಹೋರಾಟವೇ ಕಾರಣ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಾ.ಜೋಳದ ರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಗುರುವಾರ ಆಯೋಜಿಸಿದ್ದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಬು ಜಗಜೀವನ್ ರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಹಿರಿಯರು ಕಂಡ ಕನಸುಗಳು, ಅವರು ಮಾಡಿದ ಸಾಧನೆಗಳು ಮತ್ತು ಹೋರಾಟಗಳ ಫಲವಾಗಿ ನಮಗೆ ಇಂತಹ ಅವಕಾಶ ದೊರೆತಿದೆ ಎಂದು ತಿಳಿಸಿದ ಅವರು, ಈ ಎಲ್ಲ ಮಹನೀಯರಿಗೆ ನಾವೆಲ್ಲರೂ ಕೃತಜ್ಞರಾಗಿರಬೇಕು ಮತ್ತು ಅವರನ್ನು ಮತ್ತೊಮ್ಮೆ ಸ್ಮರಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಭಾರತದ ಸಂವಿಧಾನವು ಕೇವಲ ಒಂದು ಪುಸ್ತಕವಲ್ಲ, ಬದಲಿಗೆ ಅದು ನಮ್ಮ ಜೀವನ ವಿಧಾನವಾಗಿದ್ದು ಪ್ರತಿಯೊಬ್ಬ ನಾಗರಿಕನೂ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನವೆಂಬರ್ 26, 1949ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿತು ಎಂದು ಸ್ಮರಿಸಿದ ಅವರು, ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಸಭೆಗೆ ಅಂತಿಮ ಕರಡು ಪ್ರತಿಯನ್ನು ನೀಡುತ್ತಿರುವ ಚಿತ್ರವನ್ನು ಉಲ್ಲೇಖಿಸಿ, ಭಾರತ ಎನ್ನುವುದು ಒಂದು ಕನಸಾಗಿದ್ದು, ಆ ಕನಸಿನ ಎಲ್ಲಾ ಅಂಶಗಳನ್ನು ಒಟ್ಟುಗೂಡಿಸಿದ ಕೃತಿಯೇ ಸಂವಿಧಾನವಾಗಿದೆ ಎಂದು ವಿವರಿಸಿದರು.

ಸಂವಿಧಾನದಲ್ಲಿನ ಮೂಲಭೂತ ಹಕ್ಕುಗಳ ಜೊತೆಗೆ ಭಾಗ 4(ಎ) ಅಡಿಯಲ್ಲಿ ಬರುವ ಮೂಲಭೂತ ಕರ್ತವ್ಯಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ಶಿಕ್ಷಣದ ಹಕ್ಕಿನಂತೆಯೇ 18 ವರ್ಷದವರೆಗೆ ಕಡ್ಡಾಯ ಶಿಕ್ಷಣವೂ ಒಂದು ಕರ್ತವ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಕೇವಲ ಎಂಜಿನಿಯರಿAಗ್ ಅಥವಾ ವೈದ್ಯಕೀಯದಂತಹ ವೃತ್ತಿಗಳಿಗೆ ಸೀಮಿತವಾಗದೆ, ಸೇನೆ, ವಾಯುಪಡೆ, ಕಾನೂನು ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಉತ್ತಮ ವ್ಯಾಸಂಗ ಮಾಡಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಮತ್ತು ಸಂವಿಧಾನ ನೀಡಿದ ಅವಕಾಶಗಳಿಗೆ ಬೆಲೆ ಕೊಟ್ಟು ಓದಬೇಕು ಎಂದು ಸಲಹೆ ನೀಡಿದರು.

ಸಂವಿಧಾನದ ಆಶಯ, ನ್ಯಾಯ, ಸ್ವಾತಂತ್ರö್ಯ, ಸಮಾನತೆ ಮತ್ತು ಭ್ರಾತೃತ್ವ ಎಂಬ ನಾಲ್ಕು ಆಧಾರಸ್ತಂಭಗಳು ಪ್ರತಿಯೊಬ್ಬರ ವೈಯಕ್ತಿಕ ಹಾಗೂ ಸಾರ್ವಜನಿಕ ಬದುಕಿನಲ್ಲಿ ಮತ್ತು ಹೃದಯದಲ್ಲಿ ನೆಲೆಗೊಳ್ಳಬೇಕು ಎಂದು ಆಶಿಸಿದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ಭಾರತದ ಸಂವಿಧಾನ ಕೇವಲ ಆಡಳಿತದ ಕಾನೂನು ಗ್ರಂಥವಲ್ಲ; ಅದು ನಮ್ಮೆಲ್ಲರ ಶಕ್ತಿ ಮತ್ತು ಭವಿಷ್ಯವಾಗಿದೆ. ಸಂವಿಧಾನವನ್ನು ಗೌರವಿಸಿ, ಪ್ರೀತಿಸಿ, ಯಥಾವತ್ತಾಗಿ ಕಾರ್ಯರೂಪಕ್ಕೆ ತಂದಾಗ ಮಾತ್ರ ಪ್ರತಿಯೊಬ್ಬರೂ ಸಮಾನವಾಗಿ, ಸ್ವತಂತ್ರವಾಗಿ ಹಾಗೂ ಸಂತೋಷದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಆಶಿಸಿದ ಅವರು, ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಮಾತನಾಡಿ, ಸಂವಿಧಾನ ದಿನಾಚರಣೆಯ ಪೂರ್ವಭಾವಿಯಾಗಿ ಸೆಪ್ಟೆಂಬರ್ 15ರಂದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗಿತ್ತು. ಪ್ರತಿ ವರ್ಷದಂತೆ ಈ ಬಾರಿಯೂ ತಾಲೂಕು ಮಟ್ಟದಲ್ಲಿ ಯುವ ಸಂಸತ್ ಆಯೋಜಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯ ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಬ್ಬರಂತೆ ಒಟ್ಟು ಐದು ವಿದ್ಯಾರ್ಥಿಗಳನ್ನು ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯುವ ಸಂಸತ್ ಕಾರ್ಯಕ್ರಮಕ್ಕೆ ಕಳುಹಿಸಲಾಗಿದೆ. 32 ಜಿಲ್ಲೆಗಳು ಭಾಗವಹಿಸಿದ್ದ ರಾಜ್ಯ ಮಟ್ಟದ ಯುವ ಸಂಸತ್ ನಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ವಿದ್ಯಾರ್ಥಿ ಮಾರೇಶ್ ಅವರು ‘ಮುಖ್ಯಮಂತ್ರಿ' ಹುದ್ದೆಯ ಸ್ಥಾನಕ್ಕೆ ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರು ಹಾಗೂ ಅಂಬೇಡ್ಕರವಾದಿ, ಚಿತ್ರಕಲಾವಿದರಾದ ಸುಗ್ಗೇನಹಳ್ಳಿ ರಮೇಶ್ ಕಂಪ್ಲಿ ಅವರು ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ನಗರಾಭಿವೃದ್ಧಿ ಮೂಲಸೌಕರ್ಯ ಹಾಗೂ ಹಣಕಾಸು ನಿಗಮದ ನಿರ್ದೇಶಕ ಎಚ್. ಹುಸೇನಪ್ಪ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ನಿರ್ದೇಶಕ ಎಚ್. ಸಿದ್ದೇಶ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘ-ಸ0ಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande