ರಕ್ತಕ್ಕೆ ಪರ್ಯಾಯವಿಲ್ಲ, ರಕ್ತದಾನದಿಂದ ಮೂರು ಜೀವ ಉಳಿಸಲು ಸಾಧ್ಯ: ಆರೋಗ್ಯ ಸಚಿವ ಯು.ಟಿ. ಖಾದರ್
ಬೆಂಗಳೂರು, 27 ನವೆಂಬರ್ (ಹಿ.ಸ.): ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಶಿಬಿರಕ್ಕೆ ಆಗಮಿಸಿ ರಕ್ತದಾನ ಮಾಡಿದ ಎಲ್ಲ ರಕ್ತದಾನಿಗಳಿಗೆ ವಿಶೇಷ ಅಭಿನ
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು


ಬೆಂಗಳೂರು, 27 ನವೆಂಬರ್ (ಹಿ.ಸ.):

ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ಶಿಬಿರಕ್ಕೆ ಆಗಮಿಸಿ ರಕ್ತದಾನ ಮಾಡಿದ ಎಲ್ಲ ರಕ್ತದಾನಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಿ, ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದರು.

ರಕ್ತಕ್ಕೆ ಬೇರೆ ಯಾವುದೇ ಪರ್ಯಾಯವಿಲ್ಲ. ಯಾವುದೇ ಕಾರ್ಖಾನೆಯಲ್ಲಿ ಅಥವಾ ಪ್ರಯೋಗಾಲಯದಲ್ಲಿ ರಕ್ತವನ್ನು ತಯಾರಿಸಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ನೀಡಬಹುದಾದ ಅತ್ಯಮೂಲ್ಯ ಕೊಡುಗೆಯೇ ರಕ್ತದಾನ. ಇದಕ್ಕೆ ಬೇರೆ ಪರ್ಯಾಯವೇ ಇಲ್ಲ ಎಂದು ಹೇಳಿದರು.

ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಮೂರು ಬಾರಿ ನಿರ್ಭಯವಾಗಿ ರಕ್ತದಾನ ಮಾಡಬಹುದು. ಇದರಿಂದ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ವಿಶೇಷವಾಗಿ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಯುವತಿಯರು ರಕ್ತದಾನ ಮಾಡುವ ಮೊದಲು ಕಡ್ಡಾಯವಾಗಿ ವೈದ್ಯರ ಸಲಹೆ ಪಡೆಯಬೇಕು ಎಂದು ತಿಳಿಸಿದರು.

ಎಲ್ಲರೂ ಅವಕಾಶ ಸಿಕ್ಕಾಗಲೆಲ್ಲ ರಕ್ತದಾನ ಮಾಡಲು ಮುಂದಾಗಬೇಕು. ನಮ್ಮ ಒಂದು ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಆದ್ದರಿಂದ ರಕ್ತದಾನವನ್ನು ಮಾನವೀಯ ಸೇವೆಯಾಗಿ ಪರಿಗಣಿಸಿ ಪ್ರತಿಯೊಬ್ಬರೂ ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande