ಕುಡಿಯುವ ನೀರು, ಜಾನುವಾರುಗಳಿಗೆ ಮೇವು - ಆದ್ಯತೆ
ಬಳ್ಳಾರಿ, 27 ನವೆಂಬರ್ (ಹಿ.ಸ.) ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ನೂತನ
ಕುಡಿಯುವ ನೀರು, ಜಾನುವಾರುಗಳಿಗೆ ಮೇವು - ಆದ್ಯತೆ


ಕುಡಿಯುವ ನೀರು, ಜಾನುವಾರುಗಳಿಗೆ ಮೇವು - ಆದ್ಯತೆ


ಬಳ್ಳಾರಿ, 27 ನವೆಂಬರ್ (ಹಿ.ಸ.)

ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ನಿರಂತರ ನಿಗಾ ವಹಿಸಿ, ಅಗತ್ಯವಿರುವ ಕಡೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆಯಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರೈತರಿಗೆ ಕೃಷಿ ಚಟುವಟಿಕೆಗಳ ಸಂದರ್ಭದಲ್ಲಿ ಯಾವುದೇ ರೀತಿಯ ವಿದ್ಯುತ್ ಸಮಸ್ಯೆ ಉಂಟಾಗದಂತೆ ಜೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಯುವಕರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಸಂಘಟನಾ ಸಾಮರ್ಥ್ಯ ಬೆಳೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ನೋಂದಣಿ ಕಾರ್ಯ ಜಿಲ್ಲೆಯಲ್ಲಿ ಇನ್ನೂ ವೇಗ ಪಡೆಯದೇ ಇರುವುದಕ್ಕೆ ಜಿಲ್ಲಾಧಿಕಾರಿಗಳು ಕಳವಳ ವ್ಯಕ್ತಪಡಿಸಿದರು. ಯುವ ಸಂಘಗಳ ನೋಂದಣಿ ಪ್ರಕ್ರಿಯೆಗೆ ವೇಗ ನೀಡುವ ಮೂಲಕ ಯೋಜನೆಯ ಉದ್ದೇಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ತಾಲೂಕುಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಪ್ರಗತಿಯಲ್ಲಿರುವ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಲ್ಲಾ ತಾಲೂಕುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿ, ಇಲಾಖೆಗಳ ನಡುವೆ ಸಮನ್ವಯದೊಂದಿಗೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande