ಜನಸೇವೆಯೇ ಜನಾರ್ದನ ಸೇವೆ:ಶಾಸಕ ಯಶವಂತರಾಯಗೌಡ ಪಾಟೀಲ
ವಿಜಯಪುರ, 27 ನವೆಂಬರ್ (ಹಿ.ಸ.) ಜನಸೇವೆಯೇ ಜನಾರ್ದನ ಸೇವೆ ಎಂಬ ದೃಢ ನಂಬಿಕೆಯೊಂದಿಗೆ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುವುದೇ ತಮ್ಮ ಪರಮ ಗುರಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಅಧಿಕಾರಕ್ಕಿಂತ ಜನರ ಪ್ರೀತಿ, ವಿಶ್ವಾಸ ಹಾಗೂ ಅವರ ಮೊಗದ ಮೇಲಿನ ನಗು ನ
ಅಹವಳು


ವಿಜಯಪುರ, 27 ನವೆಂಬರ್ (ಹಿ.ಸ.)

ಜನಸೇವೆಯೇ ಜನಾರ್ದನ ಸೇವೆ ಎಂಬ ದೃಢ ನಂಬಿಕೆಯೊಂದಿಗೆ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುವುದೇ ತಮ್ಮ ಪರಮ ಗುರಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಅಧಿಕಾರಕ್ಕಿಂತ ಜನರ ಪ್ರೀತಿ, ವಿಶ್ವಾಸ ಹಾಗೂ ಅವರ ಮೊಗದ ಮೇಲಿನ ನಗು ನಮಗೆ ನಿಜವಾದ ಸಂಪತ್ತು. ಜನಪ್ರತಿನಿಧಿಯಾಗಿ ಅಧಿಕಾರ ದೊರೆತಿರುವುದು ಜನರ ಸೇವೆ ಮಾಡಲು ಸಿಕ್ಕಿರುವ ಅವಕಾಶವೆಂದು ಭಾವಿಸಿದ್ದೇನೆ. ಹೀಗಾಗಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಅವರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.

ನಿಸ್ವಾರ್ಥ ಸೇವೆ ಮತ್ತು ನಿರಂತರ ಅಭಿವೃದ್ಧಿಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಹಾಗೂ ನ್ಯಾಯ ತಲುಪಬೇಕು. ಯಾವುದೇ ವರ್ಗದ ಜನರು ಅಭಿವೃದ್ಧಿಯಿಂದ ವಂಚಿತರಾಗಬಾರದು ಎಂಬ ಆಶಯ ನಮ್ಮದಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಜನರ ಅಗತ್ಯಗಳಿಗೆ ಸ್ಪಂದಿಸುವ ಕಾರ್ಯಗಳಿಗೆ ನಿರಂತರ ಆದ್ಯತೆ ನೀಡಲಾಗುವುದು ಎಂದರು.

ಜನರ ವಿಶ್ವಾಸ ಮತ್ತು ಪ್ರೀತಿಯೇ ಸಾರ್ವಜನಿಕ ಜೀವನದಲ್ಲಿ ಮುನ್ನಡೆಯಲು ಪ್ರೇರಣೆಯಾಗಿದ್ದು, ಜನರ ಆಶೋತ್ತರಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನಕಲ್ಯಾಣದ ಕೆಲಸಗಳಲ್ಲಿ ಸದಾ ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande