
ಬೆಂಗಳೂರು, 27 ನವೆಂಬರ್ (ಹಿ.ಸ.):
ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಇಂದು ಆರ್.ಟಿ. ನಗರದ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ನಿನ್ನೆ ವಿವಾಹವಾದ ಬಸವರಾಜ ಬೊಮ್ಮಾಯಿ ಅವರ ಪುತ್ರಿ ಅದಿತಿ ಬೊಮ್ಮಾಯಿ ಹಾಗೂ ಅವರ ಪತಿಯನ್ನು ಅಭಿನಂದಿಸಿ, ನವದಂಪತಿಗೆ ಶುಭಾಶಯಗಳನ್ನು ಕೋರಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.