ನಂದಿಕೇಶ್ವರದಲ್ಲಿ ನ.30ರಂದು ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮ
ಬಾಗಲಕೋಟೆ , 27 ನವೆಂಬರ್ (ಹಿ.ಸ.) ಸ್ವಚ್ಛತೆ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ನವೆಂಬರ್ 30ರಂದು ನಂದಿಕೇಶ್ವರ ಗ್ರಾಮದಲ್ಲಿ ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಾತರಕಿ ಹಾಗೂ ಚಾಣಕ್ಯ ನಗರ
ಶೌಚಾಲಯ ಅಭಿಯಾನ


ಬಾಗಲಕೋಟೆ , 27 ನವೆಂಬರ್ (ಹಿ.ಸ.)

ಸ್ವಚ್ಛತೆ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ನವೆಂಬರ್ 30ರಂದು ನಂದಿಕೇಶ್ವರ ಗ್ರಾಮದಲ್ಲಿ ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಾತರಕಿ ಹಾಗೂ ಚಾಣಕ್ಯ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಬಾದಾಮಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಂದಿಕೇಶ್ವರ ಗ್ರಾಮದ ಶ್ರೀ ಕುಮಾರೇಶ್ವರ ಅನುಭವ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸಾರ್ವಜನಿಕರಲ್ಲಿ ಶೌಚಾಲಯ ಬಳಕೆಯ ಮಹತ್ವದ ಕುರಿತು ಅರಿವು ಮೂಡಿಸುವುದು, ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣಕ್ಕೆ ಜನಸಹಭಾಗಿತ್ವವನ್ನು ಉತ್ತೇಜಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಬಯಲು ಶೌಚದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಶೌಚಾಲಯ ಬಳಕೆಯನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು. ಸ್ವಚ್ಛತೆ ಕೇವಲ ವೈಯಕ್ತಿಕ ಜವಾಬ್ದಾರಿಯಾಗಿರದೆ ಇಡೀ ಸಮಾಜದ ಹೊಣೆಗಾರಿಕೆಯಾಗಿದೆ. ಗ್ರಾಮದಲ್ಲಿ ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ನಿರ್ಮಿಸಲು ಮಹಿಳೆಯರು, ಯುವಕರು ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂಬ ಆಶಯದೊಂದಿಗೆ ಈ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಬಿಕೇಶ್ವರ, ನೆಲವಗಿ ಹಾಗೂ ಗೊವಣಕಿ ಗ್ರಾಮಗಳ ಸಮಸ್ತ ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆಯೋಜಕ ನಾಗರಾಜ ಕಲ್ಲಪ್ಪ ಮನವಿ ಮಾಡಿದ್ದಾರೆ.

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕರೆ

ಶೌಚಾಲಯ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ, ಪರಿಸರವನ್ನು ಸಂರಕ್ಷಿಸಿ ಹಾಗೂ ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು. ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯೇ ಸ್ವಚ್ಛ ಮತ್ತು ಆರೋಗ್ಯವಂತ ಗ್ರಾಮದ ನಿರ್ಮಾಣಕ್ಕೆ ನಾಂದಿಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande