ದಾವಣಗೆರೆಯಲ್ಲಿ ಭಕ್ತ ಕನಕದಾಸರ 539ನೇ ಜಯಂತ್ಯೋತ್ಸವ ಸಂಭ್ರಮ: ಅದ್ಧೂರಿ ಮೆರವಣಿಗೆ
ದಾವಣಗೆರೆಯಲ್ಲಿ 539ನೇ ಭಕ್ತ ಕನಕದಾಸರ ಜಯಂತ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾ ಕಚೇರಿವರೆಗೆ ನಡೆದ ಅದ್ಧೂರಿ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿದ್ದವು. ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸೇರಿದ
davangere-celebrates-539th-kanakadasa-jayanthi-with-grand-procession


ದಾವಣಗೆರೆ, 27 ನವೆಂಬರ್ (ಹಿ.ಸ.):

ದಾವಣಗೆರೆಯಲ್ಲಿ 539ನೇ ಭಕ್ತ ಕನಕದಾಸರ ಜಯಂತ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅದ್ಧೂರಿ ಮೆರವಣಿಗೆಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದಾವಣಗೆರೆ ಶಾಸಕ ಸಮರ್ಥ್ ಶಾಮನೂರು ಅವರು ಕೂಡ ಪುಷ್ಪನಮನ ಸಲ್ಲಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ತೆಕ್ಕಣ್ಣನವರ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೆರವಣಿಗೆಯುದ್ದಕ್ಕೂ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಹಾಗೂ ಸಾಂಸ್ಕೃತಿಕ ಕಲಾತಂಡಗಳು ತಮ್ಮ ಕಲಾಪ್ರದರ್ಶನದ ಮೂಲಕ ಸಂಭ್ರಮಕ್ಕೆ ಮೆರುಗು ನೀಡಿದವು.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಕಚೇರಿವರೆಗೆ ಸಾಗಿತು. ನೂರಾರು ಭಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕನಕದಾಸರ ಜಯಂತಿಯನ್ನು ಸಡಗರದಿಂದ ಆಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande