ಗುಳೇದಗುಡ್ಡದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ₹5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಭೂಮಿಪೂಜೆ
ಬಾಗಲಕೋಟ , 28 ನವೆಂಬರ್ (ಹಿ.ಸ.) ಗುಳೇದಗುಡ್ಡ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಗುಳೇದಗುಡ್ಡ ನಗರದಲ್ಲಿ ಆಸಂಗಿ–ಲಾಯಲಗುಂದಿ–ನಾಗರಾಳ ಎಸ್.ಪಿ. ಮುಖ್ಯ ರಸ್ತೆಯ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಸುಮಾರು ₹5 ಕೋಟಿ
ಕಾಮಗಾರಿ


ಬಾಗಲಕೋಟ , 28 ನವೆಂಬರ್ (ಹಿ.ಸ.)

ಗುಳೇದಗುಡ್ಡ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಗುಳೇದಗುಡ್ಡ ನಗರದಲ್ಲಿ ಆಸಂಗಿ–ಲಾಯಲಗುಂದಿ–ನಾಗರಾಳ ಎಸ್.ಪಿ. ಮುಖ್ಯ ರಸ್ತೆಯ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸುಮಾರು ₹5 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಳ್ಳಲಿರುವ ಸೇತುವೆ ನಿರ್ಮಾಣ ಕಾಮಗಾರಿಯ ಭೂಮಿಪೂಜೆಯನ್ನು ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು ಸಮಸ್ತ ಗುರುಹಿರಿಯರು ಹಾಗೂ ಗಣ್ಯರ ಸಮ್ಮುಖದಲ್ಲಿ ನೆರವೇರಿಸಿದರು.

ಈ ಸೇತುವೆ ನಿರ್ಮಾಣದಿಂದ ಈ ಭಾಗದ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ಸಾರ್ವಜನಿಕರು, ರೈತರು ಹಾಗೂ ವಾಹನ ಸವಾರರಿಗೆ ಅನುಕೂಲವಾಗಲಿದೆ. ಹಲವು ವರ್ಷಗಳಿಂದ ಈ ಭಾಗದ ಜನರು ಎದುರಿಸುತ್ತಿದ್ದ ಸಂಚಾರದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಮಹತ್ವದ್ದಾಗಿದೆ.

ಗುಳೇದಗುಡ್ಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಸ್ತೆ, ಸೇತುವೆ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಗುರುಹಿರಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande