ಅನವಾಲ, ಕಾಡರಕೊಪ್ಪ ಏತ ನೀರಾವರಿ ಯೋಜನೆಗಳ ಭೂಮಿಪೂಜೆಗೆ ಸಿಎಂ ಆಗಮನ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆ
ಬಾಗಲಕೋಟೆ , 28 ನವೆಂಬರ್ (ಹಿ.ಸ.) ಬೀಳಗಿ ಮತಕ್ಷೇತ್ರದ ಅನವಾಲ ಮತ್ತು ಕಾಡರಕೊಪ್ಪ ಏತ ನೀರಾವರಿ ಯೋಜನೆಗಳ ಭೂಮಿಪೂಜೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹ
Katyakrama


ಬಾಗಲಕೋಟೆ , 28 ನವೆಂಬರ್ (ಹಿ.ಸ.)

ಬೀಳಗಿ ಮತಕ್ಷೇತ್ರದ ಅನವಾಲ ಮತ್ತು ಕಾಡರಕೊಪ್ಪ ಏತ ನೀರಾವರಿ ಯೋಜನೆಗಳ ಭೂಮಿಪೂಜೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ

ಡಿ.ಕೆ. ಶಿವಕುಮಾರ ಅವರು ಬೀಳಗಿ ಮತಕ್ಷೇತ್ರದ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಆಯೋಜಿಸಲಾಯಿತು ಎಂದು ಶಾಸಕ ಜೆ ಟಿ ಪಾಟೀಲ್ ತಿಳಿಸಿದ್ದಾರೆ

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದ ಕುರಿತು ಚರ್ಚಿಸಿ, ಭೂಮಿಪೂಜೆ ಸಮಾರಂಭದಲ್ಲಿ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಯಿತು.

ಅನವಾಲ ಮತ್ತು ಕಾಡರಕೊಪ್ಪ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮುಖಂಡರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande