ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ತೆರೆ: ಡಿಕೆಶಿ ಭರವಸೆಗೆ ಒಪ್ಪಿದ ಹೋರಾಟಗಾರ್ತಿಯರು, ಸಂಧಾನ ಸಭೆ ಯಶಸ್ವಿ
ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಮುಂದಿನ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ರೂಪಾಯಿ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಈ ಭರವಸೆಗೆ ಆಶಾ ಕಾರ್ಯಕರ್ತೆಯರು ಒಪ್ಪಿಗೆ ಸೂಚಿಸಿದ್ದಾರೆ.
DK-Shivakumar-Assures-Rs-2000-Honorarium-Hike-to-ASHA-Workers


ಬೆಂಗಳೂರು, 28 ನವೆಂಬರ್ (ಹಿ.ಸ.):

ಹಲವು ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ತಾತ್ಕಾಲಿಕ ವಿರಾಮ ದೊರೆಯುವ ಸಾಧ್ಯತೆ ಎದುರಾಗಿದೆ.

ಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಸರ್ಕಾರದ ಭರವಸೆಗೆ ಆಶಾ ಕಾರ್ಯಕರ್ತೆಯರು ಒಪ್ಪಿಗೆ ಸೂಚಿಸಿದ್ದಾರೆ.

ಮುಂದಿನ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ರೂಪಾಯಿ ಹೆಚ್ಚಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಈ ಕುರಿತು ಸಿಎಂ ಡಿ ಕೆ. ಶಿವಕುಮಾರ್ ಅವರು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 17ರಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಚಳಿ, ಮಳೆ ಎನ್ನದೆ ಹಗಲು-ರಾತ್ರಿ ಧರಣಿ ನಡೆಸುತ್ತಿದ್ದ ಕಾರ್ಯಕರ್ತೆಯರು, ಸರ್ಕಾರದಿಂದ ಲಿಖಿತ ಭರವಸೆ ನೀಡುವಂತೆ ಒತ್ತಾಯಿಸಿದ್ದರು.

ಇದೀಗ ಡಿ.ಕೆ. ಶಿವಕುಮಾರ್ ಅವರ ಸಂಧಾನ ಸಭೆಯಲ್ಲಿ ಮುಂದಿನ ಬಜೆಟ್ನಲ್ಲಿ 2 ಸಾವಿರ ರೂಪಾಯಿ ಗೌರವಧನ ಹೆಚ್ಚಳದ ಭರವಸೆ ನೀಡಲಾಗಿದ್ದು, ಇದಕ್ಕೆ ಆಶಾ ಕಾರ್ಯಕರ್ತೆಯರು ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ಹಲವು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಅಂತ್ಯ ಹಾಡುವ ಬೆಳವಣಿಗೆ ನಡೆದಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande