
ಶಿವಮೊಗ್ಗ, 28 ನವೆಂಬರ್ (ಹಿ.ಸ.)
ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ನಗರದ ಬಿ.ಎಚ್. ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳು ಹಾಗೂ ಅವರ ಪೋಷಕರಿಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು.
ಶಿವಮೊಗ್ಗ ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಒಂದರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳು ಮತ್ತು ಅವರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹಾಗೂ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.