ಹಲಗಲಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ: ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ
ಬಾಗಲಕೋಟ , 28 ನವೆಂಬರ್ (ಹಿ.ಸ.) ಮುಧೋಳ ತಾಲೂಕಿನ ಹಲಗಲಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತ್ಯುತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬಳಿಕ
ಜಯಂತಿ


ಬಾಗಲಕೋಟ , 28 ನವೆಂಬರ್ (ಹಿ.ಸ.)

ಮುಧೋಳ ತಾಲೂಕಿನ ಹಲಗಲಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು.

ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತ್ಯುತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬಳಿಕ ವಿವಿಧ ಕಲಾತಂಡಗಳು, ವಾದ್ಯಮೇಳ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಭ್ರಮದಿಂದ ಜರುಗಿತು.

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯವು ಭಾರತೀಯ ಸಂಸ್ಕೃತಿ, ಸಾಹಿತ್ಯ ಹಾಗೂ ಮಾನವೀಯ ಮೌಲ್ಯಗಳಿಗೆ ಅಪಾರ ಕೊಡುಗೆ ನೀಡಿದೆ. ಅವರ ಆದರ್ಶಗಳು, ವಿಚಾರಧಾರೆಗಳು ಮತ್ತು ಜೀವನ ಸಂದೇಶಗಳನ್ನು ಇಂದಿನ ಯುವಜನತೆ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಆಶಯದೊಂದಿಗೆ ಜಯಂತ್ಯುತ್ಸವ ಆಚರಿಸಲಾಯಿತು.

ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ವಿವಿಧ ಸಮುದಾಯಗಳ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು ಎಂದು ಜನಾರ್ಧನ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande