
ಗದಗ, 28 ನವೆಂಬರ್ (ಹಿ.ಸ.)
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಗಜೇಂದ್ರಗಡದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ನವೆಂಬರ್ 29ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಕಟ್ಟಡ ಉದ್ಘಾಟಿಸಲಿದ್ದು, ವಿಧಾನಸಭೆ ಸಭಾಪತಿ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಘನ ಉಪಸ್ಥಿತಿ ವಹಿಸುವರು.
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಡಾ. ಎಚ್.ಕೆ. ಪಾಟೀಲ, ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪಂಚಾಯಿತಿ ಸಿಇಒ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ನೂತನ ಕಟ್ಟಡವು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP