ಡಿ.1ರಂದು ಸಿಎಂ ಡಿ.ಕೆ. ಶಿವಕುಮಾರ ಬಾಗಲಕೋಟೆ ಜಿಲ್ಲೆಗೆ ಭೇಟಿ: ಸಚಿವ ವಿಜಯಾನಂದ ಕಾಶಪ್ಪನವರಿಂದ ಪೂರ್ವಭಾವಿ ಸಭೆ
ಬಾಗಲಕೋಟ , 28 ನವೆಂಬರ್ (ಹಿ.ಸ.) ಡಿಸೆಂಬರ್ 1ರಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಿದ್ಧತೆಗಳು ಆರಂಭಗೊಂಡಿವೆ. ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜಿಲ್ಲಾ ಕಚೇರ
Cm visit


ಬಾಗಲಕೋಟ , 28 ನವೆಂಬರ್ (ಹಿ.ಸ.)

ಡಿಸೆಂಬರ್ 1ರಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಿದ್ಧತೆಗಳು ಆರಂಭಗೊಂಡಿವೆ.

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಜಿಲ್ಲಾ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ಸಿದ್ಧತೆಗಳು, ಅಗತ್ಯ ವ್ಯವಸ್ಥೆಗಳು ಹಾಗೂ ಅಧಿಕಾರಿಗಳ ಜವಾಬ್ದಾರಿಗಳ ಕುರಿತು ಚರ್ಚಿಸಲಾಯಿತು.

ಬಳಿಕ ಸಚಿವ ವಿಜಯಾನಂದ ಕಾಶಪ್ಪನವರ ಅವರು ಸಂಬಂಧಿಸಿದ ಅಧಿಕಾರಿಗಳು ಹಾಗೂ ಮುಖಂಡರೊಂದಿಗೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.

ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ವೇದಿಕೆ ನಿರ್ಮಾಣ, ಸಾರ್ವಜನಿಕರ ಅನುಕೂಲ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳ ಬಗ್ಗೆ ಗಮನ ಹರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande