ಗೊಲಬಾವಿ ಗ್ರಾಮದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ: ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಸಿದ್ದು ಸವದಿ
ಬಾಗಲಕೋಟ , 28 ನವೆಂಬರ್ (ಹಿ.ಸ.) ಬನಹಟ್ಟಿ ಮತಕ್ಷೇತ್ರದ ಗೊಲಬಾವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಅವರು ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಕಾರ್ಯಕ್ರಮದ ಮೂಲಕ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನ
ಪ್ರಜಾಸೇವೆ


ಬಾಗಲಕೋಟ , 28 ನವೆಂಬರ್ (ಹಿ.ಸ.)

ಬನಹಟ್ಟಿ ಮತಕ್ಷೇತ್ರದ ಗೊಲಬಾವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಅವರು ಭಾಗವಹಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಕಾರ್ಯಕ್ರಮದ ಮೂಲಕ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ನೇರವಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತರುವ ಅವಕಾಶ ಕಲ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿದ್ದು ಸವದಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ಇಂತಹ ಜನಸಂಪರ್ಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಆಡಳಿತ ಅಧಿಕಾರಿಗಳು, ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ಶಾಸಕ ಸಿದ್ದು ಸವದಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande