
ಮಂಡ್ಯ, 28 ನವೆಂಬರ್ (ಹಿ.ಸ.):
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಜಲ್ಲಿ ತುಂಬಿಕೊಂಡು ತೆರಳುತ್ತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಥಾರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಕೇರಳ ಮೂಲದ ಲಿಫೈಲ್ ಹಾಗೂ ಮತ್ತೊಬ್ಬ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದೇ ಕಾರಿನಲ್ಲಿದ್ದ ಬಾಸಿಲ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಮೈಸೂರು ಕಡೆಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R