ವಿಜಯಪುರದಲ್ಲಿ ಎಂಟು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಸಮಸ್ಯೆ ಪರಿಹಾರಕ್ಕೆ ಸಂಗಮೇಶ ಸಾಗರ್ ಆಗ್ರಹ
ವಿಜಯಪುರ, 28 ನವೆಂಬರ್ (ಹಿ.ಸ.) ವಿಜಯಪುರ ನಗರದಲ್ಲಿ ಸಾರ್ವಜನಿಕರಿಗೆ ಎಂಟು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಸುತ್ತಿರುವುದನ್ನು ಖಂಡಿಸಿ, ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಲಾಗಿದೆ. ನಗರದ ಜನರು ಕುಡಿಯುವ ನೀರಿಗಾಗಿ ಹಲವು ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾ
ನೀರು


ವಿಜಯಪುರ, 28 ನವೆಂಬರ್ (ಹಿ.ಸ.)

ವಿಜಯಪುರ ನಗರದಲ್ಲಿ ಸಾರ್ವಜನಿಕರಿಗೆ ಎಂಟು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಸುತ್ತಿರುವುದನ್ನು ಖಂಡಿಸಿ, ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಲಾಗಿದೆ.

ನಗರದ ಜನರು ಕುಡಿಯುವ ನೀರಿಗಾಗಿ ಹಲವು ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನನಿತ್ಯದ ಅಗತ್ಯಗಳಿಗೆ ನೀರು ದೊರೆಯದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಅಗತ್ಯವಾಗಿದ್ದು, ಇಷ್ಟೊಂದು ದೀರ್ಘ ಅವಧಿಗೆ ನೀರು ಪೂರೈಸುತ್ತಿರುವುದು ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸಂಗಮೇಶ ಸಾಗರ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಎಲ್ಲ ಬಡಾವಣೆಗಳಿಗೂ ಸಮರ್ಪಕವಾಗಿ ಹಾಗೂ ನಿಯಮಿತವಾಗಿ ಕುಡಿಯುವ ನೀರು ಪೂರೈಸಲು ಸಂಬಂಧಿಸಿದ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಆಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಯಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರದಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಗಮೇಶ ಸಾಗರ್ ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande