ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಸದ ರಮೇಶ ಜಿಗಜಿಣಗಿ ಅವರಿಗೆ ರೈತ ಸಂಘದಿಂದ ಮನವಿ
ಬಾಗಲಕೋಟ , 28 ನವೆಂಬರ್ (ಹಿ.ಸ.) ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಹಾಗೂ ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದ ನೀತಿಗಳಲ್ಲಿ ರೈತಪರ ಬದಲಾವಣೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಂಸದ ರಮೇಶ ಜಿಗಜಿಣಗಿ ಅವರ ಕಚೇರಿಯಲ್ಲಿ ಮ
ಮನವಿ


ಬಾಗಲಕೋಟ , 28 ನವೆಂಬರ್ (ಹಿ.ಸ.)

ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಹಾಗೂ ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದ ನೀತಿಗಳಲ್ಲಿ ರೈತಪರ ಬದಲಾವಣೆ ತರುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸಂಸದ ರಮೇಶ ಜಿಗಜಿಣಗಿ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಹಲವು ಪ್ರಮುಖ ಬೇಡಿಕೆಗಳನ್ನು ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ರೈತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ರೈತ ಸಂಘದ ಪದಾಧಿಕಾರಿಗಳು ಸಂಸದರನ್ನು ಒತ್ತಾಯಿಸಿದರು.

ರೈತ ಸಂಘದ ಪ್ರಮುಖ ಬೇಡಿಕೆಗಳು:

* ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (MSP) ಪ್ರತಿ ಕೆ.ಜಿ.ಗೆ ₹31ರಿಂದ ₹60ಕ್ಕೆ ಹೆಚ್ಚಿಸಬೇಕು.

* ವಾಣಿಜ್ಯ ಬಳಕೆಯ ಸಕ್ಕರೆಯ ಬೆಲೆಯನ್ನು ಪ್ರತಿ ಕೆ.ಜಿ.ಗೆ ₹100 ನಿಗದಿಪಡಿಸಬೇಕು.

* ರೈತರ ಹಿತದೃಷ್ಟಿಯಿಂದ ಸಕ್ಕರೆ ಆಮದು ನೀತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.

* ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು.

ಈ ಎಲ್ಲ ಬೇಡಿಕೆಗಳನ್ನು ಲೋಕಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುವುದರ ಜೊತೆಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಸಂಸದರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದರಿಂದ, ದೂರವಾಣಿ ಮೂಲಕ ಈ ವಿಷಯವನ್ನು ತಿಳಿಸುವುದಾಗಿ ಹಾಗೂ ಮನವಿಯನ್ನು ಇ-ಮೇಲ್ ಮೂಲಕ ಕೇಂದ್ರ ಸರ್ಕಾರಕ್ಕೂ ತಲುಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ರೈತ ಸಂಘದ ಪದಾಧಿಕಾರಿಗಳು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಬಿ. ಪಾಟೀಲ ಅವರು ಮನವಿ ಸಲ್ಲಿಸಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande