ಚಂಡಮಾರುತದಿಂದ ಹಾನಿಗೊಳಗಾದ ಆಂಧ್ರಕ್ಕೆ ಕೇಂದ್ರದಿಂದ ಎಲ್ಲ ರೀತಿಯ ನೆರವು: ಅಮಿತ್ ಶಾ
ನವದೆಹಲಿ, 03 ನವೆಂಬರ್ (ಹಿ.ಸ.): ಮುರಸು ಚಂಡಮಾರುತದ ಪರಿಣಾಮ ಎದುರಿಸುತ್ತಿರುವ ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೈಲ್ ಪೋಟೋ


ನವದೆಹಲಿ, 03 ನವೆಂಬರ್ (ಹಿ.ಸ.):

ಮುರಸು ಚಂಡಮಾರುತದ ಪರಿಣಾಮ ಎದುರಿಸುತ್ತಿರುವ ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಸಂತ್ರಸ್ತರಿಗೆ ನೆರವು ಒದಗಿಸುವುದು ಹಾಗೂ ಪರಿಹಾರ ಕಾರ್ಯಗಳಲ್ಲಿ ತಂಡಗಳು ತೊಡಗಿಸಿಕೊಂಡಿವೆ ಎಂದು ಹೇಳಿದ್ದಾರೆ.

ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಸನ್ನದ್ಧವಾಗಿದ್ದು, ಆಂಧ್ರಪ್ರದೇಶದ ಜನರೊಂದಿಗೆ ಸರ್ಕಾರ ದೃಢವಾಗಿ ನಿಂತಿದೆ. ರಾಜ್ಯಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande