ವಕೀಲರ ಮೇಲಿನ ಹಲ್ಲೆ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕಲಬುರಗಿಯಲ್ಲಿ ಬೆಂಬಲ
ಮಿನಿ ವಿಧಾನಸೌಧದ ಮುಂದೆ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ; ವಕೀಲರ ರಕ್ಷಣೆಗೆ ಕಠಿಣ ಕಾನೂನು ಜಾರಿಗೆ ಆಗ್ರಹ
Kalaburagi Lawyers Protest Against Attacks, Demand Security and Legal Protection


ಕಲಬುರಗಿ, 03 ನವೆಂಬರ್ (ಹಿ.ಸ.):

ವಕೀಲರ ಮೇಲಿನ ನಿರಂತರ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ರಾಜ್ಯವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗೆ ಕಲಬುರಗಿಯಲ್ಲೂ ವಕೀಲರು ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.

ನಗರದ ಮಿನಿ ವಿಧಾನಸೌಧದ ಮುಂದೆ ಕಲಬುರಗಿ ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಮತ್ತು ಕೊಲೆ ಪ್ರಕರಣಗಳಿಂದ ವಕೀಲ ಸಮುದಾಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವೃತ್ತಿನಿರತ ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವುದರ ಜತೆಗೆ ಅವರ ವೃತ್ತಿ ಹಾಗೂ ಜೀವ ರಕ್ಷಣೆಗೆ ಅಗತ್ಯವಾದ ಕಾನೂನು ರಕ್ಷಣೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ವಕೀಲರು ಚಾಟಿ ಬೀಸುತ್ತಾ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ತಡೆಯಲು ಬಂದ ಪೊಲೀಸ್ ರ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರ ಹೋರಾಟಕ್ಕೆ ವಿವಿಧ ರೈತ ಸಂಘಟನೆಗಳೂ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವು. ವಕೀಲರ ಸುರಕ್ಷತೆಯನ್ನು ಖಾತ್ರಿಪಡಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆ ಮತ್ತು ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪರಿಣಾಮಕಾರಿ ಕಾನೂನು ಜಾರಿಗೊಳಿಸಬೇಕು ಎಂದು ಕಲಬುರಗಿ ವಕೀಲರ ಸಂಘ ಆಗ್ರಹಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande