
ಬೆಂಗಳೂರು, 04 ನವೆಂಬರ್ (ಹಿ.ಸ.):
ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನಗರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ವಿಧಾನಸೌಧ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಂಡುಬಂದಿದೆ.
ಬುಧವಾರ ಸಂಜೆ ರಾಜಧಾನಿಯ ವಿವಿಧೆಡೆ ಮಳೆಯಾಗಿದ್ದು, ಮೆಜೆಸ್ಟಿಕ್ ಹಾಗೂ ವಿಧಾನಸೌಧದ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚಾರ ನಡೆಸಲು ಪರದಾಡುವಂತಾಗಿದೆ.
ನಗರದ ಪ್ರಮುಖ ವಾಣಿಜ್ಯ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮಳೆಯ ಪರಿಣಾಮ ಗೋಚರಿಸಿದ್ದು, ವಾಹನಗಳ ಸಂಚಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಎದುರಾಗಿದೆ. ಕಚೇರಿ ಹಾಗೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದಾಗಿ ತೊಂದರೆ ಅನುಭವಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R