ಬಳ್ಳಾರಿ: ಆರೋಗ್ಯ ಕೇಂದ್ರಗಳಿಗೆ ಡಿಎಚ್ಒ ಭೇಟಿ: ಪರಿಶೀಲನೆ
ಬಳ್ಳಾರಿ, 04 ನವೆಂಬರ್ (ಹಿ.ಸ.) ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ
ಬಳ್ಳಾರಿ: ಆರೋಗ್ಯ ಕೇಂದ್ರಗಳಿಗೆ ಡಿಎಚ್ಒ ಭೇಟಿ: ಪರಿಶೀಲನೆ


ಬಳ್ಳಾರಿ: ಆರೋಗ್ಯ ಕೇಂದ್ರಗಳಿಗೆ ಡಿಎಚ್ಒ ಭೇಟಿ: ಪರಿಶೀಲನೆ


ಬಳ್ಳಾರಿ, 04 ನವೆಂಬರ್ (ಹಿ.ಸ.)

ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಅಲಕಾನಂದ ಡಿ. ಮಳಗಿ ಅವರು ಬಳ್ಳಾರಿ ನಗರ ಪ್ರದೇಶದ ಮಿಲ್ಲರ್ ಪೇಟೆ ಮತ್ತು ಕೌಲ್ ಬಜಾರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದರು. ಈ ವೇಳೆ ವಾರ್ಡ್ಗಳ ಸ್ವಚ್ಛತೆ, ಔಷಧ ದಾಸ್ತಾನು, ನೀರಿನ ಸೌಕರ್ಯ ಹಾಗೂ ಐಇಸಿ ಪರಿಕರಗಳಾದ ಭಿತ್ತಿಪತ್ರ, ಬ್ಯಾನರ್ ಮತ್ತು ಟಿವಿಗಳ ಮೂಲಕ ರಾಷ್ಟಿಯ ಆರೋಗ್ಯ ಕಾರ್ಯಕ್ರಮಗಳು ಪ್ರದರ್ಶನಗೊಂಡಿರುವ ಬಗ್ಗೆ ವೀಕ್ಷಿಸಿದರು.

ಸಾರ್ವಜನಿಕರಿಗೆ ಇಲಾಖೆಯ ಎಲ್ಲಾ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ಮತ್ತು ಉತ್ತಮ ರೀತಿಯಲ್ಲಿ ತಲುಪಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಇತರ ತಾಲೂಕುಗಳ ಆರೋಗ್ಯ ಕೇಂದ್ರಗಳಿಗೂ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಸಿರುಗುಪ್ಪ ತಾಲೂಕು: ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಆರ್. ಅಬ್ದುಲ್ಲಾ ಹಾಗೂ ಸಿರುಗುಪ್ಪ ತಾಲೂಕು ಆರೋಗ್ಯ ಅಧಿಕಾರಿ ಡಾ. ಬಸವರಾಜ್ ದಮ್ಮೂರು ಅವರು ಜಂಟಿಯಾಗಿ ಕರೂರು, ತಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಚೆಳ್ಳಗುರ್ಕಿ ಕೇಂದ್ರ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ. ಮತ್ತು ತಂಡದವರು ಬಳ್ಳಾರಿ ತಾಲೂಕಿನ ಚೆಳ್ಳಗುರ್ಕಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವಾರ್ಡ್ ಗಳನ್ನು ಪರಿಶೀಲಿಸಿ ರಾಷ್ಟಿಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಪ್ರಗತಿ ಸಾಧಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಸಂಡೂರು ತಾಲೂಕು: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಇಂದ್ರಾಣಿ ವಿ. ಹಾಗೂ ಸಂಡೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಹರೀಶ್ ಅವರು ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳು, ಆಸ್ಪತ್ರೆಯ ಸ್ವಚ್ಛತೆ ಹಾಗೂ ಐಇಸಿ ಪ್ರದರ್ಶನವನ್ನು ಪರಿಶೀಲಿಸಿದರು.

ಶಿಡಿಗಿನಮೊಳ: ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ವೀರೇಂದ್ರ ಕುಮಾರ್ ಮತ್ತು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ವೀರಕುಮಾರ್ ರೆಡ್ಡಿ ಅವರು ಜಂಟಿಯಾಗಿ ಶಿಡಿಗಿನಮೊಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿಯ ಸಭೆ ನಡೆಸಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande