ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಕಾಮಗಾರಿ ಪರಿಶೀಲನೆ
ಗದಗ, 04 ನವೆಂಬರ್ (ಹಿ.ಸ.) ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ
ಫೋಟೋ


ಗದಗ, 04 ನವೆಂಬರ್ (ಹಿ.ಸ.)

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿಧಾನವನ್ನು ಪರಿಶೀಲಿಸಿದ ಅವರು, ಯೋಜನೆಯ ನಿಯಮಾನುಸಾರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆಯೇ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸರ್ಕಾರದ ಯೋಜನೆಗಳು ಗ್ರಾಮೀಣ ಜನರಿಗೆ ಸಮರ್ಪಕವಾಗಿ ತಲುಪುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ನಿಗದಿತ ಮಾನದಂಡಗಳ ಪ್ರಕಾರ ಗುಣಮಟ್ಟದಿಂದ ನಿರ್ವಹಿಸಬೇಕು. ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಡಕೋಳ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಮಾಲವಾಡ, ವಿಬಿ-ಜಿ ರಾಮ್-ಜಿ ಯೋಜನೆಯ ತಾಂತ್ರಿಕ ಸಂಯೋಜಕಿ ವಿಜಯಲಕ್ಷ್ಮಿ ಅಂಗಡಿ, ಐ.ಇ.ಸಿ. ಸಂಯೋಜಕ ವಿರೇಶ ಪಟ್ಟಣಶೆಟ್ಟಿ ಹಾಗೂ ತಾಂತ್ರಿಕ ಸಹಾಯಕ ಆಂಜನೇಯ ಬಿ. ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande