
ನವದೆಹಲಿ, 04 ನವೆಂಬರ್ (ಹಿ.ಸ.):
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಏಷ್ಯನ್ ಪ್ಯಾರಾ ಕ್ರೀಡಾಕೂಟ 2026ರಲ್ಲಿ ಪಾಲ್ಗೊಂಡಿದ್ದ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ.
ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ನವೆಂಬರ್ 5ರಂದು ಸಂಜೆ ಸುಮಾರು 4.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಉಪಸ್ಥಿತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.
ಕಾರ್ಯಕ್ರಮದಲ್ಲಿ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು, ಅವರ ತರಬೇತುದಾರರು, ಭಾರತೀಯ ಪ್ಯಾರಾಲಿಂಪಿಕ್ ಸಮಿತಿ ಹಾಗೂ ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಜಪಾನ್‌ನ ಐಚಿ-ನಗೋಯಾದಲ್ಲಿ ಈ ವರ್ಷ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಅತ್ಯುತ್ತಮ ಸಾಧನೆ ದಾಖಲಿಸಿದೆ. ಒಟ್ಟು 97 ಪ್ಯಾರಾ ಕ್ರೀಡಾಪಟುಗಳು 114 ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ 30 ಚಿನ್ನ, 35 ಬೆಳ್ಳಿ ಹಾಗೂ 49 ಕಂಚಿನ ಪದಕಗಳು ಸೇರಿವೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.