ತುಂಗಭದ್ರಾ ಜಲಾಶಯ : ಕಾಲುವೆಗಳಿಗೆ ನವೆಂಬರ್ 30 ರವರಿಗೆ ನೀರು ಹರಿಸಲು ಸಿಎಂಗೆ ಮನವಿ
ಬೆಂಗಳೂರು, 04 ನವೆಂಬರ್ (ಹಿ.ಸ.) ತುಂಗಭದ್ರಾ ಜಲಾಶಯದ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ನವೆಂಬರ್ 30 ರವರೆಗೆ ಸಮರ್ಪಕವಾಗಿ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯ ಸಂಸದರು, ಸಚಿವರು, ಶಾಸಕರು, ವಿಧಾನಪರಿಷತ್ ಸದಸ
ತುಂಗಭದ್ರಾ ಜಲಾಶಯ : ಕಾಲುವೆಗಳಿಗೆ ನವೆಂಬರ್ 30 ರವರಿಗೆ ನೀರು ಹರಿಸಲು ಸಿಎಂಗೆ ಮನವಿ


ಬೆಂಗಳೂರು, 04 ನವೆಂಬರ್ (ಹಿ.ಸ.)

ತುಂಗಭದ್ರಾ ಜಲಾಶಯದ ರೈತರು ಬೆಳೆದ ಬೆಳೆಗಳಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ನವೆಂಬರ್ 30 ರವರೆಗೆ ಸಮರ್ಪಕವಾಗಿ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಯ ಸಂಸದರು, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರ ಅವರ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿಗಳನ್ನು ಬುಧವಾರ ಅವರ ಕಚೇರಿಯಲ್ಲಿ ಭೇಟಿ ಮಾಡಿ, ರೈತರ ಹಿತಾಸಕ್ತಿಗಳನ್ನು ಕಾಪಾಡಲು ಬೆಳೆಗಳನ್ನು ಸಂರಕ್ಷಣೆ ಮಾಡಲು ನವೆಂಬರ್ 30ರವರೆಗೆ ನೀರು ಹರಿಸುವುದು ಅನಿವಾರ್ಯ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟಿದೆ.

ಅಕ್ಟೋಬರ್ 19 ರಂದು ನಡೆದ ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನವೆಂಬರ್ 20ರ ವರೆಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ಆದರೆ, ಮಳೆಯ ಅಭಾವದ ಕಾರಣ ಕಟಾವು ಹಂತದಲ್ಲಿರುವ ಬೆಳೆಗಳಿಗೆ ಹೆಚ್ಚುವರಿಯಾಗಿ 10 ದಿನಗಳ ಕಾಲ ನೀರು ಪೂರೈಕೆ ಮಾಡಿದರೆ ಭತ್ತ, ಜೋಳ, ಮೆಣಸಿನಕಾಯಿ ಬೆಳೆಗಳು ಸಂಪೂರ್ಣವಾಗಿ ಬಂದು ರೈತರಿಗೆ ಆರ್ಥಿಕವಾಗಿ ಪ್ರಗತಿ ಸಾಧ್ಯ. ಬೇಸಿಗೆಯ ಕುಡಿಯುವ ನೀರಿಗಾಗಿ ಕೆರೆಗಳಲ್ಲಿ ನೀರು ಶೇಖರಣೆಗೆ ಅನುಕೂಲವಾಗಲಿದೆ ಎಂದು ನಿಯೋಗವು ವಿವರಿಸಿದೆ.

ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಚಿವರಾದ ಶಿವರಾಜ್ ತಂಗಡಗಿ, ವಸತಿ ಸಚಿವರಾದ ಬಿ.ಜೆಡ್. ಜಮೀರ್ ಅಹಮದ್ ಖಾನ್, ಶಾಸಕರಾದ ಹೆಚ್.ಆರ್. ಗವಿಯಪ್ಪ, ಹಂಪನಗೌಡ ಬಾದರ್ಲಿ, ಬಿ.ಎಂ. ನಾಗರಾಜ್, ಬಸನಗೌಡ ತುರ್ವಿಹಾಳ್, ಬಸವನಗೌಡ ಬಾದರ್ಲಿ, ತುಂಗಭದ್ರಾ ರೈತ ಸಂಘದ ಅಧ್ಯಕ್ಷರಾದ ದರೂರು ಪುರುಷೋತ್ತಮ್ ಗೌಡ ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande