
ಕೋಲಾರ, 05 ನವೆಂಬರ್ (ಹಿ.ಸ.) ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಸರಣಿ ದರ ಏರಿಕೆ ಹಾಗೂ ಕಾಂಗ್ರೆಸ್ ವ್ಯಾಪಕ ಭ್ರಷ್ಟಚಾರಗಳ ವಿರುದ್ದ ಶುಕ್ರವಾರ ನಗರದ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಗ್ಯಾರೆಂಟಿ ಯೋಜನೆಯ ಗೃಹಲಕ್ಷ್ಮಿ ಯೋಜನೆಯಲ್ಲಿ ೨ ತಿಂಗಳಿ0ದ ಬಾಕಿ ಉಳಿಸಿ ಕೊಂಡು ಸುಮಾರು ೫ ಸಾವಿರ ಕೋಟಿ ಸಾರ್ವಜನಿಕರಿಗೆ ನೀಡಬೇಕಾದ ಹಣವನ್ನು ಲೂಟಿ ಮಾಡಿದೆ. ಜನರಿಗೆ ಗ್ಯಾರೆಂಟಿ ಯೋಜನೆಗಳಿಂದ ಹೊರೆ ಮಾಡಲಾಗಿದೆ. ಹಾಲು ಉತ್ಪಾದಕ ರೈತರಿಗೆ ನೀಡುವ ದರ ಹೆಚ್ಚಿಸುವ ನೆಪದಲ್ಲಿ ಸಾರ್ವಜನಿಕರ ಮೇಲೆ ದುಬಾರಿ ದರ ಏರಿಕೆ ಮಾಡಿದೆ. ಮತ್ತೊಂದು ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಪುರುಷರಿಗೆ ಬಸ್ಗಳ ಪ್ರಯಾಣ ದರ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ವ್ಯಂಗವಾಡಿದರು.
ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿ ಹಾಲಿನ ದರ, ದಿನಸಿಗಳ ದರ, ಬಸ್ ದರ ಸೇರಿದಂತೆ ಎಲ್ಲವನ್ನು ಏರಿಕೆ ಮಾಡುವ ಮೂಲಕ ನಮ್ಮ ರಾಜ್ಯ ರಾಷ್ಟçದಲ್ಲಿಯೇ ನಂಬರ್ ಓನ್ ಸ್ಥಾನದಲ್ಲಿದೆ. ಏರಿಕೆ ಮಾಡುವ ಮೂಲಕ ಮುಖ್ಯ ಮಂತ್ರಿ ಶಿವಕುಮಾರ್ ಹೇಳಿರುವಂತೆ ನಂಬರ್ ಒನ್ ಸ್ಥಾನದ ಐತಿಹಾಸಿಕ ದಾಖಲೆಯನ್ನು ಮಾಡಿದೆ. ಪ್ರಜಾಪ್ರಭುತ್ವ ಉಳಿಸುವ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಎಸ್.ಐ.ಆರ್. ಮತ ಪಟ್ಟಿಯ ಪರಿಷ್ಕರಣೆ ಬಗ್ಗೆ ಜನರಲ್ಲಿ ಗೊಂದಲ ಮತ್ತು ಅರಾಜಕತೆಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ರಾಜಕೀಯ ಪಕ್ಷಗಳಿಗೆ ಪ್ರತಿಭಟನೆ ನಡೆಸುವ ಹಕ್ಕಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಸಂಯಮ ಮತ್ತು ಜವಾಬ್ದಾರಿ ಇರಬೇಕು. ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಚುನಾವಣೆಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬ0ಧಿಸಿದ0ತೆ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ.
ಮತದಾರರ ಪಟ್ಟಿಯಲ್ಲಿ ಅಕ್ರಮಗಳಾಗಿವೆ ಎಂದು ಆರೋಪಿಸುವ ಕಾಂಗ್ರೆಸ್, ಚುನಾವಣಾ ವ್ಯವಸ್ಥೆಯ ಮೇಲೆ ಜನರಿಗೆ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಈ ವಿಚಾರದಲ್ಲಿ ಸೂಕ್ತ ಸಾಕ್ಷ್ಯಧಾರಗಳೊಂದಿಗೆ ಕಾನೂನುಬದ್ಧವಾಗಿ ಹೋರಾಟ ನಡೆಸಬೇಕೇ ಹೊರತು ರಾಜಕೀಯ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವಂತ ಅರಾಜಕತೆ ಸೃಷ್ಟಿಸಬಾರದು ಎಂದರು.
ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರ ಹೇಳಿಕೆಗಳನ್ನು ಕಾಂಗ್ರೆಸ್ ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ವಿವಾದ ಸೃಷ್ಟಿಸುತ್ತಿದೆ. ರಾಜಕೀಯ ಭಾಷಣಗಳ ಸಂದರ್ಭದಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ತಿರುಚಿ ಪ್ರಚಾರ ಮಾಡುವುದು ಸರಿಯಲ್ಲ. ಯಾಾವುದೇ ವ್ಯಕ್ತಿಯ ವಿರುದ್ದವಾಗಿ ವೈಯುಕ್ತಿಕವಾಗಿ ಹೇಳಿಲ್ಲ ಅವರು ಹೇಳಿರುವುದು ಕಾಂಗ್ರೇಸ್ ಪಕ್ಷವನ್ನು ತುಂಡು ತುಂಡಾಗಿ ಕತ್ತರಿಸಿ ಅರಬಿ ಸಮುದ್ರಕ್ಕೆ ಎಸೆಯ ಬೇಕೆಂದು ಸಹಜವಾದ ಟೀಕೆ ಮಾಡಿದ್ದಾರೆ ಹೊರತಾಗಿ ಅವರು ಯಾವುದೇ ರೀತಿ ಪ್ರಚೋದನಕಾರಿ ಅಥವಾ ಬೆದರಿಕೆಯ ಹೇಳಿಕೆಗಳನ್ನು ನೀಡಿಲ್ಲ ಎಂದು ಪ್ರತಿಪಾದಿಸಿ ಛಲವಾದಿ ನಾರಾಯಣಸ್ವಾಮಿ ಭಾಷಣದ ವಿಡಿಯೋವನ್ನು ಪ್ರದರ್ಶಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ವಿಚಾರದಲ್ಲಿಯೂ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ ಸಂಬ0ಧಿಸಿದ0ತೆ ಸಂವಿಧಾನಾತ್ಮಕ ಮತ್ತು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿ ಕೇಂದ್ರ ಸರ್ಕಾರ ಹಾಗೂ ಸಂಸತ್ತಿಗೂ ಇದೆ. ಈ ವಿಚಾರದಲ್ಲಿ ಹಿಂದಿನ ರಾಜಕೀಯ ನಿಲುವುಗಳನ್ನು ಮರೆಮಾಚಿ ಬಿಜೆಪಿ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದ ಅವರು ಕೊಡಲೇ ಛಲವಾದಿ ನಾರಾಯಣಸ್ವಾಮಿ ಅವರ ಮೇಲಿನ ದೂರನ್ನು ಹಿಂಪಡೆಯ ಬೇಕು ಇಲ್ಲವಾದಲ್ಲಿ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಷರಿಸಿದರು.
ರಾಜಕೀಯದಲ್ಲಿ ದ್ವೇಷದ ಭಾಷಣ ಮತ್ತು ದ್ವೇಷದ ಅಪರಾಧಗಳ ನಿಯಂತ್ರಣಕ್ಕೆ ಸಂಬ0ಧಿಸಿದ ವಿಧೇಯಕದ ವಿಚಾರದಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಪರಸ್ಪರ ಗೌರವದಿಂದ ನಡೆದುಕೊಳ್ಳಬೇಕು. ವೈಯಕ್ತಿಕ ನಿಂದನೆ, ಬೆದರಿಕೆ ಮತ್ತು ಪ್ರಚೋದನಕಾರಿ ಮಾತುಗಳಿಂದ ಸಮಾಜದಲ್ಲಿ ಅಶಾಂತಿ ಅರಾಜಕತೆಯು ಉಂಟಾಗಬಾರದು. ಪ್ರಶ್ನೆಯೊಂದಕ್ಕೆ ಖರ್ಗೆಯವರು ಮೋದಿಯವರ ಅಪ್ಪನ ಬಗ್ಗೆ ಪ್ರಸ್ತಾಪಿಸಿರುವುದು ಸರಿಯೇ ಎಂದು ಪ್ರಶ್ನಿಸಿ ಅವರು ರಾಜಕೀಯ ಭಿನ್ನಾಭಿಪ್ರಾಯಗಳ ಬಗ್ಗೆ ಪ್ರತಿಭಟನೆ, ಚರ್ಚೆ ಮತ್ತು ಕಾನೂನುಬದ್ಧ ಹೋರಾಟಗಳ ಮೂಲಕ ವ್ಯಕ್ತಪಡಿಸಬೇಕು. ಯಾವುದೇ ಪಕ್ಷದ ನಾಯಕರು ಸಮಾಜದ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಓಂಶಕ್ತಿ ಚಲಪತಿ ಸಲಹೆ ನೀಡಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿಕೆಯು ವೈಯುಕ್ತಿವಾದ ಹೇಳಿಕೆಯಾಗಿದೆ. ಚುನಾವಣೆ ಟಿಕೆಟ್ ಹಂಚಿಕೆಗೆ ಸಂಬ0ಧಿಸಿದ0ತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಎನ್.ಡಿ.ಎ. ಸಮಿತಿ ವರಿಷ್ಟರು ತೀರ್ಮಾನಿಸಲಿದ್ದಾರೆ ಎಂದು ಅದೇ ಸಭೆಯಲ್ಲಿ ನಾನು ಸ್ವಷ್ಟ ಪಡೆಸಿದ್ದೇನೆಂದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಿಜಯ ಕುಮಾರ್ ಮಾತನಾಡಿ ಸಂಸದ ಮಲ್ಲೇಶ್ ಬಾಬು ಸೇರಿದಂತೆ ಜೆ.ಡಿ.ಎಸ್. ಪಕ್ಷದವರು ಭಾಷಣಗಳಲ್ಲಿ ಮುಂದಿನ ಮುಖ್ಯ ಮಂತ್ರಿ ಕುಮಾರಣ್ಣ ಎಂದು ಹೇಳುವುದಿಲ್ಲಾವೇ ಅದೇ ರೀತಿ ವರ್ತೂರು ಪ್ರಕಾಶ ಅವರು ಸಹಜವಾಗಿ ಹೇಳಿದ್ದಾರೆ ಎಂದು ಸಮರ್ಥಿಸಿ ಕೊಂಡರು.
ಕೆಂಬೋಡಿ ನಾರಾಯಣಸ್ವಾಮಿ ಮಾಡತನಾಡಿ ಬಿಜೆಪಿ ಪಕ್ಷದ ಬೆಂಬಲ ಇಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಮಲ್ಲೇಶ್ ಬಾಬು ಆಯ್ಕೆ ಅಸಾಧ್ಯವಾಗುತ್ತಿತ್ತು ಇದೇ ರೀತಿ ಎರಡು ಪಕ್ಷಗಳ ಒಗ್ಗಟ್ಟಿನಿಂದಲೇ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ.ಡಿ.ಎ. ಅಭ್ಯರ್ಥಿ ಆಯ್ಕೆ ಸಾಧ್ಯವಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಿ.ಡಿ.ರಾಮಚಂದ್ರ. ಸಾ.ಮ. ಅನಿಲ್ಬಾಬು. ಎಸ್.ಬಿ.ಮುನಿವೆಂಕಟಪ್ಪ, ಮಾಗೇರಿ ನಾರಾಯಣಸ್ವಾಮಿ, ಮಮತಮ್ಮ, ತಿಮ್ಮರಾಯಪ್ಪ, ವಕೀಲರಾದ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್