ಎಸ್ಐಆರ್ ವಿರುದ್ಧ ಮಂಡ್ಯದಲ್ಲಿ ಹೆದ್ದಾರಿ ತಡೆದು ಕಾಂಗ್ರೆಸ್ ಪ್ರತಿಭಟನೆ
ಮಂಡ್ಯ, 05 ನವೆಂಬರ್ (ಹಿ.ಸ.): ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ವಿರೋಧಿಸಿ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸಂಜಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ''ವೋಟ್ ಬಚಾವೋ, ದೇಶ್ ಬಚಾವೋ'' ಎಂಬ ಘೋಷಣೆಯುಳ್ಳ ಪೋಸ್ಟರ್ಗಳನ್ನು ಹಿಡಿದು ಕೇ
Congress-Protest-Against-SIR-Mandya-Highway-Blocked


ಮಂಡ್ಯ, 05 ನವೆಂಬರ್ (ಹಿ.ಸ.):

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ವಿರೋಧಿಸಿ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸಂಜಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು 'ವೋಟ್ ಬಚಾವೋ, ದೇಶ್ ಬಚಾವೋ' ಎಂಬ ಘೋಷಣೆಯುಳ್ಳ ಪೋಸ್ಟರ್ಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಬೆಂಗಳೂರು–ಮೈಸೂರು ಹೆದ್ದಾರಿ ತಡೆದು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ, ಚುನಾವಣಾ ಆಯುಕ್ತರು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಎಷ್ಟೋ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿರುವ ಮತದಾನದ ಹಕ್ಕನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮಾದರಿಯ ಅಭಿವೃದ್ಧಿಯ ಭರವಸೆ ನೀಡಿದ್ದರೂ, ದೇಶದಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ ಎಂದು ಟೀಕಿಸಿದರು.

ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು ಹಾಗೂ ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ ಕುಮಾರ್, ಮುಡಾ ಅಧ್ಯಕ್ಷ ಬಿ.ಪಿ. ಪ್ರಕಾಶ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande