


ಬೆಂಗಳೂರು, 05 ನವೆಂಬರ್ (ಹಿ.ಸ.):
ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮ ಹಿರಿಯ ಸಹೋದರ ಶ್ರೀ ಸತ್ಯನಾರಾಯಣರಾವ್ ಅವರನ್ನು ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಸಹೋದರರ ಯೋಗಕ್ಷೇಮ ತಿಳಿದುಕೊಂಡ ಅವರು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು ಆಸ್ಪತ್ರೆ ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.