ಮಹಿಳಾ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ
ಮಹಿಳಾ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ
ಕೋಲಾರ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು


ಕೋಲಾರ, 05 ನವೆಂಬರ್ (ಹಿ.ಸ.)

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಐವರು ವಿದ್ಯಾರ್ಥಿನಿಯರು ಜಯಗಳಿಸಿದ್ದಾರೆ.

ಅಧ್ಯಕ್ಷರಾಗಿ ಜೋಯ್ಸ್, ಉಪಾಧ್ಯಕ್ಷರಾಗಿ ಮಧುಶ್ರೀ, ಪ್ರಧಾನ ಕಾರ್ಯದರ್ಶಿಯಾಗಿ ಋತು ಸಿ.ಬಿ., ಜಂಟಿ ಕಾರ್ಯದರ್ಶಿಗಳಾಗಿ ಮುಸರತ್ ಫಾತಿಮಾ ಮತ್ತು ಸ್ಪಂದನ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸಗೌಡ, ಸಹಾಯಕ ಪ್ರಾಧ್ಯಾಪಕ ಅಮ್ಮೇರಹಳ್ಳಿ ಎನ್. ಪ್ರಕಾಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande