ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಎಸ್ಕೆಯುನಲ್ಲಿ ಎಬಿವಿಪಿ ಪ್ರತಿಭಟನೆ
ಬಳ್ಳಾರಿ, 06 ನವೆಂಬರ್ (ಹಿ.ಸ.) ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ನಡೆಸಿ, ಕುಲಪತಿಗಳಿಗೆ ಮನವಿ ಸಲ್ಲಿಸಿದ್ದಾರೆ. ಎಬಿವಿಪಿಯ ಕೇಂದ್ರೀಯ ಕಾರ್ಯಕಾರಿ ಸಮಿತಿ ಸದಸ್ಯ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಎಸ್ಕೆಯುನಲ್ಲಿ ಎಬಿವಿಪಿ ಪ್ರತಿಭಟನೆ


ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಎಸ್ಕೆಯುನಲ್ಲಿ ಎಬಿವಿಪಿ ಪ್ರತಿಭಟನೆ


ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಎಸ್ಕೆಯುನಲ್ಲಿ ಎಬಿವಿಪಿ ಪ್ರತಿಭಟನೆ


ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಎಸ್ಕೆಯುನಲ್ಲಿ ಎಬಿವಿಪಿ ಪ್ರತಿಭಟನೆ


ಬಳ್ಳಾರಿ, 06 ನವೆಂಬರ್ (ಹಿ.ಸ.)

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ನಡೆಸಿ, ಕುಲಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಎಬಿವಿಪಿಯ ಕೇಂದ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾದ ಸಚಿನ್ ಕುಳಗೇರಿ ಅವರು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ವಿಶ್ವವಿದ್ಯಾಲಯದ ಆಡಳಿತ ಚೆಲ್ಲಾಟವಾಡಬಾರದು. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಶುಲ್ಕ ಪಾವತಿಸುತ್ತಿದ್ದು, ಅವರಿಗೆ ಸಮಯಕ್ಕೆ ಸರಿಯಾಗಿ ಫಲಿತಾಂಶ, ಪ್ರಮಾಣಪತ್ರ ಹಾಗೂ ಅಗತ್ಯ ಶೈಕ್ಷಣಿಕ ಸೇವೆಗಳನ್ನು ಒದಗಿಸುವುದು ವಿಶ್ವವಿದ್ಯಾಲಯದ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಪಾರದರ್ಶಕ ಆಡಳಿತವನ್ನು ನೀಡಬೇಕು ಎಂದು ಆಗ್ರಹಿಸಿದರು.

ಎಬಿವಿಪಿಯ ವಿಭಾಗ ಸಂಚಾಲಕರು ಕೆ ದಿಲೀಪಕುಮಾರ ಅವರು, ವಿಶ್ವವಿದ್ಯಾಲಯದ ಸಮಸ್ಯೆಗಳಿಂದ ಸಾವಿರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಡಳಿತ ಮಂಡಳಿಯು ನಿರ್ಲಕ್ಷಿಸುತ್ತಿದೆ ಎಂದು ಟೀಕಿಸಿದರು.

ವಿದ್ಯಾರ್ಥಿ ಕುಮಾರಿ ಭಾರತಿ ಅವರು, ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿರುವ ವಿವಿಧ ಶುಲ್ಕಗಳ ನಿರ್ವಹಣೆ ಮತ್ತು ಸೇವೆಗಳಲ್ಲಿ

ಪಾರದರ್ಶಕತೆ ಇಲ್ಲವಾಗಿದೆ. ಪದವಿಯ ತಾತ್ಕಾಲಿಕ ಪ್ರಮಾಣಪತ್ರಕ್ಕೆ ಶುಲ್ಕ ವಿಧಿಸುವುದು, ಘಟಿಕೋತ್ಸವದ ಪದವಿ ಪ್ರಮಾಣಪತ್ರಗಳನ್ನು ನೀಡುವಲ್ಲಿ ವಿಳಂಬ ಧೋರಣೆಯನ್ನು ಅನುಸರಿಸುವುದು ಇನ್ನಿತರೆ ಸಮಸ್ಯೆಗಳು ದಿನೇ ದಿನೇ ಹೆಚ್ಚುತ್ತಿವೆ ಎಂದು ಆರೋಪಿಸಿದರು.

ರಸಾಯನಶಾಸ್ತ್ರದ ಕಳೆದ ಸೆಮಿಸ್ಟರ್ ಪರೀಕ್ಷೆಯಲ್ಲಿ 400 ವಿದ್ಯಾರ್ಥಿಗಳು ಫೇಲಾಗಿದ್ದು, ಮರುಮೌಲ್ಯಮಾಪನದ ನಂತರ ಅನೇಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವಿಷಯದ ಮೌಲ್ಯಮಾಪನ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಗುಣಮಟ್ಟದ ಬಗ್ಗೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಎಬಿವಿಪಿಯ ನಗರ ಸಂಘಟನಾ ಕಾರ್ಯದರ್ಶಿ ಸಂದೀಪ ಅರಳಗುಂಡಿ, ನಗರ ಕಾರ್ಯದರ್ಶಿಯಾದ ಜಿ. ಕಿರಣ್ಗೌಡ, ಸಹ ಕಾರ್ಯದರ್ಶಿಗಳಾದ ರಘು, ಪ್ರಜ್ವಲ, ದೇವೇಂದ್ರ, ಮಹೇಶ .ಸಿ.ಡಿ, ಮನೋಜ, ಮಾರುತಿ, ಸಾಗರ, ಹೇಮಂತ, ಶರಣಬಸವ, ಓಂಕಾರ್ ಗೌಡ, ಗೋವಿಂದ, ಮಂಜುನಾಥ, ಮಹೇಶ್ವರಿ, ಜಯಶ್ರೀ, ಕೆ. ಲಕ್ಷ್ಮಿ, ಭಾಗ್ಯಲಕ್ಷ್ಮಿ ಸೇರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande