ದೆಹಲಿಗೆ ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು, 06 ನವೆಂಬರ್ (ಹಿ.ಸ.): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ. ಈ ಕುರಿತು ಕನಕಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾಹುಲ್ ಗ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್


ಬೆಂಗಳೂರು, 06 ನವೆಂಬರ್ (ಹಿ.ಸ.):

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ.

ಈ ಕುರಿತು ಕನಕಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾಹುಲ್ ಗಾಂಧಿ ಅವರು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರ ಸಭೆ ಕರೆದಿದ್ದಾರೆ. ಶುಕ್ರವಾರ ಸಂಜೆ ನಡೆಯಲಿರುವ ಈ ಸಭೆ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದರು.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೇರೆ ಯಾರನ್ನೂ ಭೇಟಿಯಾಗುವ ಕಾರ್ಯಕ್ರಮ ಇಲ್ಲ ಎಂದು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande