ಉಪರಾಷ್ಟ್ರಪತಿ ಸೇರಿದಂತೆ ಗಣ್ಯರಿಂದ ಧನತೇರಸ್ ಹಬ್ಬದ ಶುಭಾಶಯ
ನವದೆಹಲಿ, 06 ನವೆಂಬರ್ (ಹಿ.ಸ.): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಶುಕ್ರವಾರ ದೇಶದ ಜನತೆಗೆ ಧನತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸಾಮಾಜಿಕ ಜಾಲತಾಣದಲ್ಲ
प्रतीकात्मक


ನವದೆಹಲಿ, 06 ನವೆಂಬರ್ (ಹಿ.ಸ.):

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಶುಕ್ರವಾರ ದೇಶದ ಜನತೆಗೆ ಧನತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿ, ಭಗವಾನ್ ಧನ್ವಂತರಿಯ ಕೃಪೆಯಿಂದ ಎಲ್ಲರ ಜೀವನದಲ್ಲಿ ಸುಖ, ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಸಂತೋಷ ನೆಲೆಸಿರಲಿ. ಎಲ್ಲರ ಭವಿಷ್ಯ ಮಂಗಳಮಯವಾಗಿರಲಿ ಎಂದು ಹಾರೈಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಗವಾನ್ ಧನ್ವಂತರಿಯ ದಿವ್ಯ ಕೃಪೆಯಿಂದ ಪ್ರತಿಯೊಬ್ಬರ ಜೀವನವೂ ಸುಖ, ಶಾಂತಿ ಮತ್ತು ಉತ್ತಮ ಆರೋಗ್ಯದಿಂದ ಸದಾ ಬೆಳಗಲಿ. ಪ್ರತಿಯೊಂದು ಕುಟುಂಬದಲ್ಲೂ ಉತ್ಸಾಹ ಮತ್ತು ಸಂತೋಷದ ದೀಪ ನಿರಂತರವಾಗಿ ಪ್ರಜ್ವಲಿಸಲಿ ಎಂದು ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಧನ್ವಂತರಿಯನ್ನು ಸ್ತುತಿಸುವ ಸಂಸ್ಕೃತ ಶ್ಲೋಕವನ್ನೂ ಹಂಚಿಕೊಂಡಿದ್ದಾರೆ.

ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅವರು ಭಗವಾನ್ ಧನ್ವಂತರಿಯ ಕೃಪೆಯಿಂದ ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರೆಯಲಿ. ತಾಯಿ ಲಕ್ಷ್ಮಿಯ ಆಶೀರ್ವಾದದಿಂದ ಪ್ರತಿಯೊಂದು ಮನೆಯಲ್ಲೂ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದ್ದಾರೆ. ಸ್ವಚ್ಛತೆ, ಪರಿಸರ ಸಂರಕ್ಷಣೆ, ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಪ್ರಗತಿಯನ್ನು ಜೀವನದ ಭಾಗವಾಗಿಸಿಕೊಳ್ಳುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಗವಾನ್ ಧನ್ವಂತರಿ ಮತ್ತು ತಾಯಿ ಲಕ್ಷ್ಮಿಯ ಆಶೀರ್ವಾದದಿಂದ ಎಲ್ಲರ ಜೀವನದಲ್ಲಿ ಆರೋಗ್ಯ, ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ. ಈ ಪವಿತ್ರ ಹಬ್ಬ ಎಲ್ಲರ ಬದುಕಿನಲ್ಲಿ ಹೊಸ ಚೈತನ್ಯ ಮತ್ತು ಸಕಾರಾತ್ಮಕತೆಯನ್ನು ತರಲಿ ಎಂದು ಹಾರೈಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಗವಾನ್ ಧನ್ವಂತರಿ ಎಲ್ಲರಿಗೂ ಸುಖ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಶುಭ ಕೋರಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಭಗವಾನ್ ಧನ್ವಂತರಿ ಮತ್ತು ತಾಯಿ ಲಕ್ಷ್ಮಿಯ ಕೃಪೆಯಿಂದ ಎಲ್ಲರ ಜೀವನದಲ್ಲಿ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಮೃದ್ಧಿ ಸದಾ ನೆಲೆಸಿರಲಿ ಎಂದು ಪ್ರಾರ್ಥಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಧನ್ವಂತರಿ ಆರಾಧನೆಯ ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲಿ ಉತ್ತಮ ಆರೋಗ್ಯ, ಸುಖ ಮತ್ತು ಸೌಭಾಗ್ಯ ತರಲಿ. ತಾಯಿ ಲಕ್ಷ್ಮಿಯ ಕೃಪೆಯಿಂದ ಪ್ರತಿಯೊಂದು ಮನೆಯೂ ಸಂಪತ್ತು ಮತ್ತು ಸಮೃದ್ಧಿಯಿಂದ ತುಂಬಿರಲಿ ಎಂದು ಹಾರೈಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಕರೆಯಂತೆ ಸ್ಥಳೀಯ ಕುಶಲಕರ್ಮಿಗಳು ಮತ್ತು ಸಣ್ಣ ವ್ಯಾಪಾರಿಗಳಿಂದ ಖರೀದಿ ಮಾಡುವ ಮೂಲಕ ಅವರ ಮನೆಗಳಲ್ಲಿಯೂ ಸಂತೋಷದ ದೀಪ ಬೆಳಗಿಸೋಣ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಭಗವಾನ್ ಧನ್ವಂತರಿ ಆರೋಗ್ಯ ಸಂಪತ್ತನ್ನು ಕರುಣಿಸಲಿ ಹಾಗೂ ತಾಯಿ ಲಕ್ಷ್ಮಿ ಪ್ರತಿಯೊಬ್ಬರ ಮನೆ ಮತ್ತು ಅಂಗಳವನ್ನು ಸುಖ, ಸಮೃದ್ಧಿ, ಧನಧಾನ್ಯ ಮತ್ತು ವೈಭವದಿಂದ ತುಂಬಿಸಲಿ ಎಂದು ಶುಭ ಹಾರೈಸಿದ್ದಾರೆ.

ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಗ್ಯ, ಸಂಪತ್ತು ಮತ್ತು ವೈಭವದ ಸಂಕೇತವಾದ ಧನತೇರಸ್ ಹಬ್ಬ ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಸಂತೋಷ ತರಲಿ ಎಂದು ಹಾರೈಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲಿ ಅಪಾರ ಸಂತೋಷ ತರಲಿ. ತಾಯಿ ಲಕ್ಷ್ಮಿ ಮತ್ತು ಭಗವಾನ್ ಧನ್ವಂತರಿ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭ ಕೋರಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಾಯಿ ಲಕ್ಷ್ಮಿಯ ಕೃಪೆಯಿಂದ ಎಲ್ಲರ ಜೀವನದಲ್ಲಿ ಉತ್ತಮ ಆರೋಗ್ಯ, ಸುಖ, ಸಮೃದ್ಧಿ ಮತ್ತು ಸಂತೋಷ ನೆಲೆಸಿರಲಿ ಎಂದು ಹಾರೈಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande