ದೀಪಾವಳಿ ಪ್ರಯುಕ್ತ ಬೆಂಗಳೂರು–ಬೆಳಗಾವಿ ನಡುವೆ ಎರಡು ವಿಶೇಷ ರೈಲು ಸಂಚಾರ
ಬೆಂಗಳೂರು, 06 ನವೆಂಬರ್ (ಹಿ.ಸ.): ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿರುವ ನೈಋತ್ಯ ರೈಲ್ವ
ಸಾಂಕೇತಿಕ


ಬೆಂಗಳೂರು, 06 ನವೆಂಬರ್ (ಹಿ.ಸ.):

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿರುವ ನೈಋತ್ಯ ರೈಲ್ವೆ, ನವೆಂಬರ್ 7ರಿಂದ 10ರವರೆಗೆ ವಿಶೇಷ ರೈಲು ಸೇವೆ ಒದಗಿಸಲಿದೆ.

ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಓಡಿಸುವಂತೆ ಪ್ರಲ್ಹಾದ ಜೋಶಿ ಅವರು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದೆ.

ಎರಡು ಬಾರಿ ಸಂಚರಿಸಲಿರುವ ವಿಶೇಷ ರೈಲುಗಳು

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ಎರಡೂ ರೈಲುಗಳು ತಲಾ ಎರಡು ಬಾರಿ ಸಂಚರಿಸಲಿವೆ. ಈ ರೈಲುಗಳು ಬೆಂಗಳೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಬೆಳಗಾವಿ ತಲುಪಲಿವೆ.

ರೈಲುಗಳ ಸಂಚಾರ ವೇಳಾಪಟ್ಟಿ

06551 ಸಂಖ್ಯೆಯ ವಿಶೇಷ ರೈಲು ನವೆಂಬರ್ 7 ಮತ್ತು 9ರಂದು ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

06552 ಸಂಖ್ಯೆಯ ವಿಶೇಷ ರೈಲು ನವೆಂಬರ್ 8 ಮತ್ತು 10ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 5 ಗಂಟೆಗೆ ಬೆಂಗಳೂರು ತಲುಪಲಿದೆ.

12 ನಿಲ್ದಾಣಗಳಲ್ಲಿ ನಿಲುಗಡೆ

ಪ್ರಯಾಣಿಕರ ಅನುಕೂಲಕ್ಕಾಗಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೊಂಡಾ ಮತ್ತು ಖಾನಾಪುರ ರೈಲು ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆ ಹೊಂದಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande