
ನವದೆಹಲಿ, 06 ಅಕ್ಟೋಬರ್ (ಹಿ.ಸ.):
ಫರೀದಾಬಾದ್ನ ಕಾರ್ಮಿಕರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ನೇತ್ರ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕಾರ್ನಿಯಾ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಅಕ್ಟೋಬರ್ 27ರಂದು 46 ವರ್ಷದ ರೋಗಿಯೊಬ್ಬರಿಗೆ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕಾರ್ನಿಯಾದಲ್ಲಿ ಮಬ್ಬು ಉಂಟಾದ ಪರಿಣಾಮ ದೃಷ್ಟಿದೋಷದಿಂದ ಬಳಲುತ್ತಿದ್ದ ರೋಗಿಗೆ ಪೆನೆಟ್ರೇಟಿಂಗ್ ಕೆರಾಟೋಪ್ಲಾಸ್ಟಿ (ಕಾರ್ನಿಯಾ ಕಸಿ) ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ನೇತ್ರ ಶಸ್ತ್ರಚಿಕಿತ್ಸಕ ಹಾಗೂ ವೈದ್ಯಕೀಯ ಅಧೀಕ್ಷಕ ಡಾ. ಎಸ್.ಆರ್. ಸಿಂಗ್ ಮತ್ತು ಅವರ ತಂಡ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಈ ಸಾಧನೆಯು ಆಸ್ಪತ್ರೆಯಲ್ಲಿ ತಜ್ಞ ವೈದ್ಯಕೀಯ ಸೇವೆಗಳನ್ನು ಬಲಪಡಿಸುವುದರ ಜೊತೆಗೆ ಇಎಸ್ಐಸಿ ಫಲಾನುಭವಿಗಳಿಗೆ ಸುಧಾರಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಶಸ್ತ್ರಚಿಕಿತ್ಸೆಯಲ್ಲಿ ತೊಡಗಿಸಿಕೊಂಡ ನೇತ್ರ ಚಿಕಿತ್ಸಾ ವಿಭಾಗದ ವೈದ್ಯಕೀಯ ತಂಡದ ಸಮರ್ಪಣೆ, ವೈದ್ಯಕೀಯ ಪರಿಣತಿ ಮತ್ತು ಅತ್ಯುತ್ತಮ ಕಾರ್ಯವನ್ನು ಸಂಸ್ಥೆ ಶ್ಲಾಘಿಸಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.