
ಬಾಗಲಕೋಟೆ, 06 ನವೆಂಬರ್ (ಹಿ.ಸ.)
ಮುಧೋಳ ತಾಲೂಕು ವ್ಯಾಪ್ತಿಯಲ್ಲಿರುವ ಧಾನ್ಯ ಸಂಗ್ರಹಣಾ ಉಗ್ರಾಣಕ್ಕೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಹಶೀಲ್ದಾರ್ ಪ್ರಕಾಶ್ ಅವರು ಭೇಟಿ ನೀಡಿ, ಅಲ್ಲಿನ ಧಾನ್ಯಗಳ ಸಂಗ್ರಹಣೆ ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಉಗ್ರಾಣದಲ್ಲಿ ಸಂಗ್ರಹಿಸಲಾಗಿರುವ ವಿವಿಧ ಬಗೆಯ ಧಾನ್ಯಗಳನ್ನು ವ್ಯವಸ್ಥಿತವಾಗಿ ಮತ್ತು ಸುರಕ್ಷಿತವಾಗಿ ಸಂಗ್ರಹಿಸಲಾಗಿದೆಯೇ ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಧಾನ್ಯಗಳ ಸಂಗ್ರಹಣಾ ವಿಧಾನ, ಅವುಗಳ ಗುಣಮಟ್ಟ ಹಾಗೂ ಉಗ್ರಾಣದಲ್ಲಿನ ಒಟ್ಟಾರೆ ನಿರ್ವಹಣಾ ವ್ಯವಸ್ಥೆಯನ್ನು ಸೂಕ್ಷ್ಮವಾಗಿ ವೀಕ್ಷಿಸಿದರು
ಸಂಗ್ರಹಿಸಿಡಲಾಗಿರುವ ಎಲ್ಲ ಧಾನ್ಯಗಳ ಗುಣಮಟ್ಟವನ್ನು ಪರೀಕ್ಷಿಸಿ, ಧಾನ್ಯಗಳು ಉತ್ತಮ ಸ್ಥಿತಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪರಿಶೀಲನೆ ಕೈಗೊಳ್ಳಲಾಯಿತು. ಧಾನ್ಯಗಳ ಸಂಗ್ರಹಣೆಯಲ್ಲಿ ಸ್ವಚ್ಛತೆ, ಗುಣಮಟ್ಟ ಮತ್ತು ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡುವ ಮಹತ್ವದ ಕುರಿತು ಅಧಿಕಾರಿಗಳು ಗಮನಹರಿಸಿದರು.
ಧಾನ್ಯಗಳು ದೀರ್ಘಕಾಲ ಸಂಗ್ರಹಣೆಯಲ್ಲಿದ್ದರೂ ಅವುಗಳ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಉಗ್ರಾಣದ ವ್ಯವಸ್ಥೆ ಹಾಗೂ ಧಾನ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು, ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್) ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande