ನವೆಂಬರ್ 07 : ಅಮರಾಪುರದಲ್ಲಿ ಪ್ರಜಾಸೇವಾ ಆಂದೋಲನ
ಬಳ್ಳಾರಿ, 06 ನವೆಂಬರ್ (ಹಿ.ಸ.) ರಾಜ್ಯ ಸರ್ಕಾರದ ಸುತ್ತೋಲೆಯನ್ವಯ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಪ್ರಜಾಸೇವಾ ಅಭಿಯಾನ’ದ ಅಂಗವಾಗಿ, ಬಳ್ಳಾರಿ ತಾಲೂಕಿನ ರೂಪನಗುಡಿ ಹೋಬಳಿಯ ಅಮರಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ನವೆಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ‘ಪ್ರಜಾಸೇವಾ ಆಂದೋಲನ’ ಸಭೆಯನ್ನು ಆಯೋಜಿಸ
ನವೆಂಬರ್ 07 : ಅಮರಾಪುರದಲ್ಲಿ ಪ್ರಜಾಸೇವಾ ಆಂದೋಲನ


ಬಳ್ಳಾರಿ, 06 ನವೆಂಬರ್ (ಹಿ.ಸ.)

ರಾಜ್ಯ ಸರ್ಕಾರದ ಸುತ್ತೋಲೆಯನ್ವಯ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಪ್ರಜಾಸೇವಾ ಅಭಿಯಾನ’ದ ಅಂಗವಾಗಿ, ಬಳ್ಳಾರಿ ತಾಲೂಕಿನ ರೂಪನಗುಡಿ ಹೋಬಳಿಯ ಅಮರಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ನವೆಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ‘ಪ್ರಜಾಸೇವಾ ಆಂದೋಲನ’ ಸಭೆಯನ್ನು ಆಯೋಜಿಸಲಾಗಿದೆ.

ಬಳ್ಳಾರಿ ಗ್ರಾಮೀಣ ಹಾಗೂ ನಗರ ಶಾಸಕರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಬಳ್ಳಾರಿ ತಾಲೂಕಿನ ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಬಳ್ಳಾರಿ ತಾಲೂಕು ತಹಸೀಲ್ದಾರರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande