

ಬಳ್ಳಾರಿ, 06 ನವೆಂಬರ್ (ಹಿ.ಸ.)
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಮೌಲ್ಯಮಾಪನ ಕುಲಸಚಿವರಾಗಿ ಪ್ರೊ. ಪಿ. ಕಣ್ಣನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾಗಿದ್ದ ಇವರನ್ನು ಸರ್ಕಾರ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ನೇಮಕ ಮಾಡಿದೆ.
ಈವರೆಗೆ ಮೌಲ್ಯಮಾಪನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಎನ್.ಎಂ. ಸಾಲಿಯ ಅವರನ್ನು ಸರ್ಕಾರ ಅವರ ಮಾತೃ ಸಂಸ್ಥೆಗೆ ವರ್ಗಾವಣೆ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್