ಬಾಗಲಕೋಟೆ: ಓಂ ಜ್ಯುವೆಲ್ಲರ್ಸ್ನಲ್ಲಿ ಬೆಳ್ಳಿ ಆಭರಣ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬಾಗಲಕೋಟೆ, 06 ನವೆಂಬರ್ (ಹಿ.ಸ.) ನಗರದ ನವನಗರದಲ್ಲಿರುವ ಓಂ ಜ್ಯುವೆಲ್ಲರ್ಸ್‌ನಲ್ಲಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ ಬೆಳ್ಳಿ ಆಭರಣಗಳನ್ನು ಚೀಲದಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗಿದ್ದು, ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಕಳ್ಳತನ


ಬಾಗಲಕೋಟೆ, 06 ನವೆಂಬರ್ (ಹಿ.ಸ.)

ನಗರದ ನವನಗರದಲ್ಲಿರುವ ಓಂ ಜ್ಯುವೆಲ್ಲರ್ಸ್‌ನಲ್ಲಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ ಬೆಳ್ಳಿ ಆಭರಣಗಳನ್ನು ಚೀಲದಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗಿದ್ದು, ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಕಳ್ಳರು ಚೀಲದಲ್ಲಿ ಬೆಳ್ಳಿ ಆಭರಣಗಳನ್ನು ತುಂಬಿಕೊಂಡು ಹೋಗಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಕಳ್ಳರ ಪತ್ತೆಗೆ ಪೊಲೀಸರಿಗೆ ಮಹತ್ವದ ಸುಳಿವು ನೀಡಿವೆ. ದೃಶ್ಯಾವಳಿಗಳನ್ನು ಪರಿಶೀಲಿಸಿ ಕಳ್ಳತನದಲ್ಲಿ ಭಾಗಿಯಾಗಿರುವವರ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande