
ಬಳ್ಳಾರಿ, 06 ನವೆಂಬರ್ (ಹಿ.ಸ.)
ಬಳ್ಳಾರಿ ನಗರದ ಪಂಜಾ ಮಕಾನ್ ಹತ್ತಿರದ, ಗೌಳೇರಹಟ್ಟಿ ಬಸ್ ನಿಲ್ದಾಣದ ಎದುರು ನಿವಾಸಿಯಾದ ಜಿಲಾನ್ ಬಾಷ (23) ಎಂಬ ಯುವಕ ಕಾಣೆಯಾಗಿದ್ದು, ಈ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಅಕ್ಟೋಬರ್ 30ರಂದು ಮಧ್ಯಾಹ್ನ ಹೊರಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ಚಹರೆ ವಿವರ:
ಅಂದಾಜು 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಸ್ವಲ್ಪ ತೆಲುಗು ಮಾತನಾಡುತ್ತಾರೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಹಳದಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಬಲಗಣ್ಣಿನ ಮೇಲೆ ಹಳೆಯ ಗಾಯದ ಗುರುತಿದೆ.
ಯುವಕನ ಬಗ್ಗೆ ಯಾವುದೇ ಮಾಹಿತಿ ಲಭಿಸಿದಲ್ಲಿ ಸಾರ್ವಜನಿಕರು ತಕ್ಷಣವೇ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ, ಬಳ್ಳಾರಿ: 08392-250033, ಪೊಲೀಸ್ ಕಂಟ್ರೋಲ್ ರೂಂ, ಬಳ್ಳಾರಿ: 08392-258100 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್