ಕುಣಿಗಲ್ ನ 20ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ
ಬೆಂಗಳೂರು, 07 ನವೆಂಬರ್ (ಹಿ.ಸ.): ಕುಣಿಗಲ್ ವಿಧಾನಸಭಾ ಕ್ಷೇತ್ರದ 20ಕ್ಕೂ ಹೆಚ್ಚು ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜನತಾದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಚಿವ ಹಾಗೂ ಹಿರಿಯ ನಾಯಕ ಡಿ. ನಾಗರಾಜಯ್ಯ ಅ
ಪಕ್ಷ ಸೇರ್ಪಡೆ


ಬೆಂಗಳೂರು, 07 ನವೆಂಬರ್ (ಹಿ.ಸ.):

ಕುಣಿಗಲ್ ವಿಧಾನಸಭಾ ಕ್ಷೇತ್ರದ 20ಕ್ಕೂ ಹೆಚ್ಚು ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜನತಾದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಡಿ. ನಾಗರಾಜಯ್ಯ ಅವರ ನೇತೃತ್ವದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಣಿಗಲ್ ಕ್ಷೇತ್ರದ ಹಿರಿಯ ಮುಖಂಡರಾದ ರವಿ, ಜಗದೀಶ್, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆಂಪಿರೇಗೌಡ, ಶಿವಶಂಕರ, ನಾರಾಯಣಪ್ಪ, ಕೆಂಪಹನುಮಯ್ಯ, ಸುರೇಶ್, ಜೆಸಿಬಿ ಗಿರೀಶ್, ಲಕ್ಷ್ಮಣ, ರೇಣುಕಯ್ಯ, ನಂಜೇಶ್, ರಾಮಕೃಷ್ಣಪ್ಪ, ವಸಂತರಾಜು, ಮನು, ಶಿವಕುಮಾರ್, ನಾಗಣ್ಣ, ಗಂಗಣ್ಣ, ರಮೇಶ್ ಮತ್ತು ಶಿವಣ್ಣ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande