
ಬೀದರ್, 07 ನವೆಂಬರ್ (ಹಿ.ಸ.):
ಬೀದರ್ನಲ್ಲಿ ನಡೆದ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದರು.
ದಲಿತ ಬಂಡಾಯ ಸಾಹಿತ್ಯವು ಶೋಷಣೆ, ಅಸಮಾನತೆ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಪ್ರಬಲ ಸಾಮಾಜಿಕ ಚಳವಳಿಯಾಗಿದೆ. ಸಮಾಜದಲ್ಲಿ ಸಮಾನತೆ, ಸ್ವಾಭಿಮಾನ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಜನಮನದಲ್ಲಿ ಬಿತ್ತುವಲ್ಲಿ ಈ ಸಾಹಿತ್ಯದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಮತ್ತು ಗೌರವಯುತ ಬದುಕು ದೊರೆಯಬೇಕು. ಬಸವಣ್ಣನವರ ಸಮಾನತೆಯ ತತ್ವ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಆಶಯಗಳು ಹಾಗೂ ಸಾಮಾಜಿಕ ನ್ಯಾಯದ ಹೋರಾಟದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಇಂತಹ ಸಾಹಿತ್ಯ ಸಮ್ಮೇಳನಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ದಲಿತ ಬಂಡಾಯ ಸಾಹಿತ್ಯದ ಚಿಂತನೆಗಳು ಸಮಾಜದಲ್ಲಿ ಜಾಗೃತಿ ಮೂಡಿಸಿ, ಸಮಾನತೆ ಮತ್ತು ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ಮತ್ತಷ್ಟು ಬಲ ನೀಡಲಿ ಎಂದು ಆಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.