
ಬೆಂಗಳೂರು, 07 ನವೆಂಬರ್ (ಹಿ.ಸ.):
ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.
ದೀಪಾವಳಿಯ ದೀಪಗಳ ಬೆಳಕು ರಾಜ್ಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆಯನ್ನು ತರಲಿ. ನಾಡಿನ ಪ್ರತಿಯೊಬ್ಬ ನಾಗರಿಕರ ಬದುಕಿನಲ್ಲಿ ಸಂತಸ, ಯಶಸ್ಸು ಹಾಗೂ ಸಂತೃಪ್ತಿ ನೆಲೆಸಲಿ ಎಂದು ವಿಜಯೇಂದ್ರ ಅವರು ಸದಾಶಯದ ಹಾರೈಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖ್ಯ ಸಚೇತಕ ಎನ್.ಆರ್.ಕೆ., ಶಾಸಕರಾದ ಎಂ. ಕೃಷ್ಣಪ್ಪ, ಗೋಪಾಲಯ್ಯ ಹಾಗೂ ಬೈರತಿ ಬಸವರಾಜ್ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.