
ಬಳ್ಳಾರಿ, 07 ನವೆಂಬರ್ (ಹಿ.ಸ.)
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಯು.ಟಿ. ಖಾದರ್ ಫರೀದ್ ಅವರು ನವೆಂಬರ್ 8 ರಂದು ಬಳ್ಳಾರಿ ನಗರಕ್ಕೆ ಭೇಟಿ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ 34ನೇ ವರ್ಷದ ರಾಜ್ಯ ಮಟ್ಟದ ಸಂಸ್ಥಾಪನಾ ದಿನಾಚರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಸಮಾರಂಭವು ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಯ ಕೌಲ್ ಬಜಾರ್ ನ ನಲ್ಲಚೆರುವು ಬಳಿಯಿರುವ ಜಿಲ್ಲಾ ಕ್ರೀಡಾಂಗಣ ರಸ್ತೆಯ ಶ್ರೀ ವಾಲ್ಮೀಕಿ ಭವನದಲ್ಲಿ ಜರುಗಲಿದೆ.
ನಂತರ ಮಧ್ಯಾಹ್ನ 3 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್