

ಬಳ್ಳಾರಿ, 07 ನವೆಂಬರ್ (ಹಿ.ಸ.)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಸಂಸದರಾದ ಈ.ತುಕಾರಾಮ್, ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಕಂಪ್ಲಿ ಶಾಸಕ ಹಾಗೂ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ (ಕಾವೇರಿ ಹ್ಯಾಂಡ್ಲ್ಯೂಮ್ಸ್) ಅಧ್ಯಕ್ಷರೂ ಆದ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಈ. ಅನ್ನಪೂರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ಜಿಲ್ಲಾ ಘಟಕದ ಛಲವಾದಿ ಮಹಾಸಭಾ ಅಧ್ಯಕ್ಷ ಸಿ.ಶಿವಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಂಪ್ಲಿಯ ಶಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದಣ್ಣ ಪರಮೇಶ್ ಅವರು ಉಪನ್ಯಾಸ ನೀಡುವರು. ಸಂಗನಕಲ್ಲಿನ ಉಷಾ ಮತ್ತು ತಂಡದಿAದ ಸುಗಮ ಸಂಗೀತ ಪ್ರಸ್ತುತ ಪಡಿಸುವರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್