ಸಚಿವ ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್-ಬಿಜೆಪಿ ಮುಖಂಡರ ನಡುವೆ ಗಲಾಟೆ
ಬೆಂಗಳೂರು, 07 ನವೆಂಬರ್ (ಹಿ.ಸ.): ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ. ಟಿನ್ ಫ್ಯಾಕ್ಟರಿ ಸಮೀಪ ಆಯೋಜಿಸಲಾಗಿದ್ದ ವಾರ್ಡ್
congress-bjp-leaders-clash-in-front-of-minister-krishna-byre-gowda-bengaluru


ಬೆಂಗಳೂರು, 07 ನವೆಂಬರ್ (ಹಿ.ಸ.):

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ಟಿನ್ ಫ್ಯಾಕ್ಟರಿ ಬಳಿ ನಡೆದಿದೆ.

ಟಿನ್ ಫ್ಯಾಕ್ಟರಿ ಸಮೀಪ ಆಯೋಜಿಸಲಾಗಿದ್ದ ವಾರ್ಡ್ ಒನ್ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಕಾರ್ಯಕ್ರಮದ ವೇಳೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಗಮನ ನೀಡುತ್ತಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ.

ಈ ವೇಳೆ ಮಾಜಿ ಕಾಂಗ್ರೆಸ್ ಎಂಎಲ್ಸಿ ಹಾಗೂ ಬಿಜೆಪಿ ಶಾಸಕ ಪರಸ್ಪರ ವಾಗ್ವಾದಕ್ಕಿಳಿದಿದ್ದು, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತದವರೆಗೂ ತಲುಪಿದೆ ಎನ್ನಲಾಗಿದೆ.

ಸಚಿವ ಕೃಷ್ಣ ಭೈರೇಗೌಡ ಅವರು ಸ್ಥಳದಲ್ಲೇ ಇದ್ದರೂ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದರು.

ವಾರ್ಡ್ ಮಟ್ಟದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಹಾಗೂ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲೇ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸಚಿವರ ಎದುರಲ್ಲೇ ನಡೆದ ಈ ರಾಜಕೀಯ ಜಟಾಪಟಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande