ಕತ್ತು ಹಿಸುಕಿ ಆಟೋ ಚಾಲಕನ ಬರ್ಬರ ಹತ್ಯೆ; ಗೊಬ್ಬುರ ಗ್ರಾಮದ ಬಳಿ ಶವ ಪತ್ತೆ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಬಿ) ಗ್ರಾಮದ ಬಳಿ ಆಟೋ ಚಾಲಕ ಸಂಜೀವಕುಮಾರ್ (50) ಅವರನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
kalaburagi-auto-driver-murdered-near-gobbur-village


ಕಲಬುರಗಿ, 07 ನವೆಂಬರ್ (ಹಿ.ಸ.):

ಆಟೋ ಚಾಲಕನೊಬ್ಬನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಬಿ) ಗ್ರಾಮದ ಬಳಿ ನಡೆದಿದೆ.

ಕಲಬುರಗಿ ನಗರದ ಶಹಬಜಾರ್ ಬಡಾವಣೆಯ ನಿವಾಸಿ ಸಂಜೀವಕುಮಾರ್ (50) ಕೊಲೆಯಾದ ವ್ಯಕ್ತಿ. ಇವರು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅಫಜಲಪುರ ತಾಲೂಕಿನ ಗೊಬ್ಬುರ (ಬಿ) ಗ್ರಾಮದ ಸಮೀಪ ಸಂಜೀವಕುಮಾರ್ ಅವರ ಮೃತದೇಹ ಪತ್ತೆಯಾಗಿದ್ದು, ಕತ್ತು ಹಿಸುಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ವೈಯಕ್ತಿಕ ದ್ವೇಷ, ಹಣಕಾಸಿನ ವ್ಯವಹಾರ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande