
ಹಾಸನ, 08 ನವೆಂಬರ್ (ಹಿ.ಸ.):
ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಕುತ್ತು ಉಂಟಾಗಲಿದೆ. ಇದನ್ನು ಜನರು ಅರ್ಥಮಾಡಿಕೊಂಡಿದ್ದು, ಬಿಜೆಪಿಗೆ ಮತ್ತೆ ಅಧಿಕಾರಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಭಾನುವಾರ ಹಾಸನ ಜಿಲ್ಲೆಯ ಭುವನಹಳ್ಳಿ ಹೆಲಿಪ್ಯಾಡ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯವನ್ನು ಹಾಳು ಮಾಡಲಾಗಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಟೀಕೆಗಳಿಗೆ ಪ್ರತಿಕ್ರಿಯಿಸಿದರು.
ವಿರೋಧ ಪಕ್ಷದವರಿಗೆ ಟೀಕೆ ಮಾಡಲು ಬೇರೆ ವಿಚಾರಗಳಿಲ್ಲವೇ? ರಾಜ್ಯದ ಜನರಿಗೆ ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ತಲುಪುತ್ತಿವೆ. ಇದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಜನತಾದಳ ಮತ್ತು ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ವಿರೋಧಿಗಳಾಗಿದ್ದಾರೆ ಎಂದು ಟೀಕಿಸಿದರು.
ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗುತ್ತಿದ್ದು, ಈ ಯೋಜನೆಗಳ ಯಶಸ್ವಿ ಅನುಷ್ಠಾನವನ್ನು ವಿರೋಧ ಪಕ್ಷದವರು ಸಹಿಸಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.