
ಶಿವಮೊಗ್ಗ, 08 ನವೆಂಬರ್ (ಹಿ.ಸ.):
ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನವೆಂಬರ್ 9ರಂದು ಬೆಳಿಗ್ಗೆ 7 ಗಂಟೆಗೆ ಶಿವಮೊಗ್ಗದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿದೆ.
ಜಿಲ್ಲಾ ನ್ಯಾಯಾಲಯದ ಆವರಣದಿಂದ ಜಾಥಾ ಆರಂಭವಾಗಲಿದೆ. ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ, ಸೈಕಲ್ ಕ್ಲಬ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ, ವಿವಿಧ ರೋಟರಿ ಕ್ಲಬ್ಗಳು, ಜೆಸಿಐ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜಾಥಾದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.